ದೆಹಲಿಯ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಆತಂಕಕ್ಕೊಳಗಾಗಿದ್ದಾರೆ. ವಾರದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ.
ಸೋಮವಾರ ದೆಹಲಿಯ 44 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು, ಇ-ಮೇಲ್ ಮಾಡಿದವರು 30 ಸಾವಿರ ಯುಎಸ್ ಡಾಲರ್ ಬೇಡಿಕೆ ಇಟ್ಟಿದ್ದರು. ಕೂಲಂಕುಷವಾಗಿ ಪರಿಶೀಲನೆ ಮಾಡಿದ ಬಳಿಕ ಸುಳ್ಳು ಬೆದರಿಕೆ ಎಂಬುದು ತಿಳಿದುಬಂದಿದೆ. ಅಗ್ನಿಶಾಮಕ ದಳ, ಪೊಲೀಸ್ ಮತ್ತು ಬಾಂಬ್ ಪತ್ತೆ ಘಟಕಗಳ ತಂಡಗಳು, ಶ್ವಾನ ದಳಗಳೊಂದಿಗೆ ಸಂಪೂರ್ಣ ತಪಾಸಣೆ ನಡೆಸಲು ಸ್ಥಳಗಳಿಗೆ ಕಳುಹಿಸಲಾಗಿದೆ.
ಶಾಲೆಗಳ ಅಧಿಕಾರಿಗಳು ತಮ್ಮ ಮಕ್ಕಳನ್ನು ತರಗತಿಗಳಿಗೆ ಕಳುಹಿಸದಂತೆ ಪೋಷಕರಿಗೆ ಸಂದೇಶಗಳನ್ನು ಕಳುಹಿಸಿದ್ದಾರೆ. ತಪಾಸಣೆ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.
Saval TV on YouTube