ಮನೆ ಸುದ್ದಿ ಜಾಲ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬೂಕರ್‌ ವಿಜೇತೆ ಬಾನು ಮುಷ್ತಾಕ್‌ ಆಯ್ಕೆ‌

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬೂಕರ್‌ ವಿಜೇತೆ ಬಾನು ಮುಷ್ತಾಕ್‌ ಆಯ್ಕೆ‌

0

ಬಳ್ಳಾರಿ : 88ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರಿನಲ್ಲಿ ಬಳ್ಳಾರಿಯಲ್ಲಿ ಜರಗಲಿದ್ದು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ, ಬೂಕರ್‌ ವಿಜೇತೆ ಬಾನು ಮುಷ್ತಾಕ್‌ ಆಯ್ಕೆಯಾಗಿದ್ದಾರೆ.

ಇಂದು ಬಳ್ಳಾರಿಯಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಮಹೇಶ್‌ ಜೋಶಿಯವರು, ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ, ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿಸಿದರು.