ಮನೆ ರಾಜ್ಯ ಗಡಿವಿವಾದ: ಡಿ.12 ರಂದು ರಾಜ್ಯ ಸಂಸದರ ನಿಯೋಗದಿಂದ ಕೇಂದ್ರ ಗೃಹ ಸಚಿವರ ಭೇಟಿ- ಸಿಎಂ ಬೊಮ್ಮಾಯಿ

ಗಡಿವಿವಾದ: ಡಿ.12 ರಂದು ರಾಜ್ಯ ಸಂಸದರ ನಿಯೋಗದಿಂದ ಕೇಂದ್ರ ಗೃಹ ಸಚಿವರ ಭೇಟಿ- ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ರಾಜ್ಯ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಅವರು, ಮಹಾರಾಷ್ಟ್ರ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿದೆ.  ನಾನು ಅಮಿತ್ ಶಾ ಅವರಿಗೆ ಕರೆ ಮಾಡಿ ಚರ್ಚಿಸಿದ್ದೇನೆ. ನನ್ನನ್ನೂ ಕೂಡ ಸಭೆಗೆ ಅಮಿತ್ ಶಾ ಕರೆದಿದ್ದಾರೆ. ಉಭಯ ರಾಜ್ಯಗಳ ಸಿಎಂಗಳ ಜೊತೆ ಸಭೆ ನಡೆಸಲಿದ್ದಾರೆ. ಈ ವೇಳೆ ಗಡಿ ಬಗ್ಗೆ ವಿವರಿಸುವೆ ಎಂದರು.

ಕರ್ನಾಟಕದ ನಿಲುವು, ವಾಸ್ತವಾಂಶ ಸಂಸದರಿಗೆ ತಿಳಿಸಿದ್ದೇನೆ. ನಮ್ಮ ಸಂಸದರಿಗೆ ಎಲ್ಲಾ ವಿವರಗಳನ್ನು ಕೂಡ ಕೊಟ್ಟಿದ್ದೇನೆ. ಶೀಘ್ರದಲ್ಲೇ ಸರ್ವಪಕ್ಷ ಸಭೆ ಕರೆಯುತ್ತೇನೆ. ಈ ಸಂಬಂಧ ಮಾಜಿ ಸಿಎಂಗಳಾದ ಹೆಚ್.ಡಿ ಕುಮಾರಸ್ವಾಮಿ,  ಸಿದ್ದರಾಮಯ್ಯ ಜೊತೆ ಮಾತನಾಡಿದ್ದೇನೆ ಎಂದು ತಿಳಿಸಿದರು.

ಹಿಂದಿನ ಲೇಖನಕಾರ್ಯಾಚರಣೆ ವಿಫಲ: ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ಸಾವು
ಮುಂದಿನ ಲೇಖನಕಿರುಕುಳದಿಂದ ಪತ್ನಿ ದೂರವಾದರೆ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್