ಮಡಿಕೇರಿ: ಅರೆಭಾಷೆ ಉಳಿದರೆ ಮಾತ್ರ ಅರೆಭಾಷೆ ಸಂಸ್ಕøತಿ, ಸಮಾಜ ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ತಮ್ಮದೇ ಆದ ವಿಭಿನ್ನ ಸಂಸ್ಕøತಿ, ಆಚಾರ-ವಿಚಾರ ಕಲೆಗಳನ್ನು ಉಳಿಸಿಕೊಂಡು ಬಂದಿರುವ ಅರೆಭಾಷೆಯನ್ನು ಎಲ್ಲೆಡೆ ಪಸರಿಸುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ.
ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಭಾಗಮಂಡಲ ನಾಡಗೌಡ ಸಮಾಜ, ಕರಿಕೆ, ಚೇರಂಬಾಣೆ ಗೌಡ ಸಮಾಜ, ಭಾಗಮಂಡಲ ನಾಡಗೌಡ ಯುವ ಒಕ್ಕೂಟ ಮತ್ತು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟ ಇವರ ಸಹಯೋಗದಲ್ಲಿ ಭಾಗಮಂಡಲದ ಮಾರುಕಟ್ಟೆ ಆವರಣದಲ್ಲಿ ಮಂಗಳವಾರ ನಡೆದ ‘ಅರೆಭಾಷೆ ಗಡಿನಾಡ ಉತ್ಸವ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅರೆಭಾಷಿಕರು ಸ್ವಾತಂತ್ರ್ಯ ಪೂರ್ವದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ಅಮರ ಸುಳ್ಯ ಇತಿಹಾಸವು ಇದಕ್ಕೆ ಸಾಕ್ಷಿಯಾಗಿದೆ. ಆ ನಿಟ್ಟಿನಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಸದಾ ಸ್ಮರಿಸುವಂತಾಗಬೇಕು ಎಂದರು.
ಮುಂದಿನ ಒಂದು ಶತಮಾನದಲ್ಲಿ ಕನ್ನಡ ಭಾಷೆ ಮಾತನಾಡುವವರ ಸಂಖ್ಯೆ ಕಡಿಮೆಯಾಗುತ್ತದೆ ಎಂಬ ಆತಂಕ ಎಲ್ಲೆಡೆ ಎದುರಾಗುತ್ತಿದೆ. ಆದ್ದರಿಂದ ಸ್ಥಳೀಯ ಭಾಷೆಗಳಾದ ಅರೆಭಾಷೆ, ಕೊಡವ, ತುಳು, ಕೊಂಕಣಿ, ಹೀಗೆ ಸಣ್ಣ ಸಣ್ಣ ಭಾಷೆಗಳನ್ನು ಉಳಿಸಿದ್ದಲ್ಲಿ, ಕನ್ನಡ ಭಾಷೆ ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ತಾಯಿ ಭಾಷೆಗೆ ಹೆಚ್ಚಿನ ಒತ್ತು ನೀಡುವಂತಾಗಬೇಕು. ಜೀವನಕ್ಕೆ ಇತರೆ ಭಾಷೆ ಕಲಿಯುವಂತಾಗಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ಅಭಿಪ್ರಾಯಪಟ್ಟರು.ಅರೆಭಾಷಿಕರು ರಾಜಕೀಯ, ಸಾಹಿತ್ಯ, ಸಂಗೀತ, ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿ ಡಿ.ವಿ.ಸದಾನಂದ ಗೌಡ, ಕೊಡಗು ಜಿಲ್ಲೆಯಲ್ಲಿ ವಿಧಾನಸಭಾ ಸದಸ್ಯರಾಗಿ ಡಿ.ಎಸ್.ಮಾದಪ್ಪ, ಚಿನ್ನಪ್ಪ, ಕೆ.ಜಿ.ಬೋಪಯ್ಯ ಕೆಲಸ ಮಾಡಿದ್ದಾರೆ ಎಂದರು.
ಕೊಡಗು ಜಿಲ್ಲೆಯಲ್ಲಿ ಹಲವು ಶತಮಾನಗಳಿಂದ ವಾಸಿಸಿಕೊಂಡು ಬಂದಿರುವ ಸಹೋದರತ್ವ, ಸಹಭಾಳ್ವೆ ಮತ್ತು ಭ್ರಾತೃತ್ವವನ್ನು ಮುಂದುವರೆಸಿಕೊಂಡು ಹೋಗಬೇಕು. ಯಾವುದೇ ಬೇಧಭಾವ ಬಿನ್ನತೆ ಇಲ್ಲದೆ ಬದುಕು ಕಟ್ಟಿಕೊಳ್ಳಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ಸಲಹೆ ಮಾಡಿದರು.ವಿವಿಧತೆಯಲ್ಲಿ ಏಕತೆ ಉಳಿಸಿಕೊಂಡು ಹೋಗಬೇಕು. ಭಾರತೀಯರು ಎಂಬ ಮನೋಭಾವ ಇರಬೇಕು. ಅರೆಭಾಷಿಕರು, ಕೊಡವರು, ಬಂಟರು, ಪರಿಶಿಷ್ಟರು, ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು, ಹೀಗೆ ಎಲ್ಲರೂ ಸಹ ಅನ್ಯೋನತೆಯಿಂದ ಬದುಕು ನಡೆಸಬೇಕು. ಇದೇ ವಿವಿಧತೆಯಲ್ಲಿ ಏಕತೆ ಕಾಣಲು ಸಾಧ್ಯ. ಅದು ಬಿಟ್ಟು ಒಂದು ಜಾತಿ, ಒಂದು ಧರ್ಮ ಇರಲು ಸಾಧ್ಯವೇ ಎಂದು ಪೊನ್ನಣ್ಣ ಪ್ರಶ್ನಿಸಿದರು.

‘ಸಮಾಜ, ಸಮಾಜಗಳ ನಡುವೆ ಭಿನ್ನತೆ ಸೃಷ್ಟಿಸುವ ವಾಟ್ಸ್ ಆಪ್ ಸಂದೇಶಗಳನ್ನು ನಂಬಬಾರದು. ಯಾವುದೇ ಸಂದೇಶಗಳನ್ನು ಪರಾಮರ್ಶಿಸಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ಕಿವಿಮಾತು ಹೇಳಿದರು.’ಅರೆಭಾಷೆಯು ನಾಡಿನ ಹೆಮ್ಮೆಯ ಸಾಹಿತ್ಯ, ಸಂಸ್ಕøತಿ ಹೊಂದಿದೆ. ಆ ನಿಟ್ಟಿನಲ್ಲಿ ಅರೆಭಾಷೆ, ಸಾಹಿತ್ಯ, ಸಂಸ್ಕøತಿಯಲ್ಲಿ ಉತ್ತಮ ಸಾಧನೆ ಮಾಡುವತ್ತ ಮುನ್ನಡೆಯಬೇಕು. ಮಕ್ಕಳ ಉಜ್ವಲ ಭವಿಷ್ಯ ಮತ್ತು ಬದುಕು ರೂಪಿಸಿಕೊಳ್ಳುವತ್ತ ಹೆಜ್ಜೆ ಇಡಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ನುಡಿದರು.
‘ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯು ಅಧ್ಯಕ್ಷರಾದ ಸದಾನಂದ ಮಾವಜಿ ಅವರ ಅಧ್ಯಕ್ಷತೆಯಲ್ಲಿ ಅಕಾಡೆಮಿ ಚಟುವಟಿಕೆಗಳನ್ನು ಉತ್ತಮವಾಗಿ ಕೈಗೊಂಡು ಸಾಹಿತ್ಯ, ಸಂಸ್ಕøತಿ, ಪರಂಪರೆಗೆ ಹೆಚ್ಚಿನ ಒತ್ತು ನೀಡಿರುವುದು ಶ್ಲಾಘನೀಯ. ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯು ಇತರ ಅಕಾಡೆಮಿಗಳಿಗೆ ಮಾದರಿಯಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.’
ಉತ್ತಮ ಕೆಲಸ ಮಾಡುವವರನ್ನು ಬೆನ್ನು ತಟ್ಟಲಾಗುವುದು. ಅಕಾಡೆಮಿ ಅಭಿವೃದ್ಧಿ ಸಂಬಂಧಿಸಿದಂತೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದರು.ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಮಾತನಾಡಿ ಈಗಾಗಲೇ ಗಡಿನಾಡ ಉತ್ಸವವನ್ನು ಸುಳ್ಯದ ಬಂದಡ್ಕ, ಮಂಡೆಕೋಲು, ಹಾಗೆಯೇ ಕೊಡಗು ಜಿಲ್ಲೆಯ ಚೆಯ್ಯಂಡಾಣೆ, ಕುಶಾಲನಗರ ಮತ್ತು ಭಾಗಮಂಡಲದಲ್ಲಿ ಹಮ್ಮಿಕೊಂಡು ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.
ಅರೆಭಾಷೆ ಸಂಸ್ಕøತಿ, ಸಾಹಿತ್ಯ, ಸಂಶೋಧನೆ ಮುಂದಿನ ಪೀಳಿಗೆಗೆ ತಿಳಿಸುವಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸದಾನಂದ ಮಾವಜಿ ಅವರು ತಿಳಿಸಿದರು.ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಮಾತನಾಡಿ ಸ್ಪರ್ಧೆ ಎಲ್ಲಾ ರಂಗದಲ್ಲೂ ಇದೆ. ಆರೋಗ್ಯಯುತ ಸ್ಪರ್ಧೆ ಇದ್ದಾಗ ಗೆಲುವು ಸಾಧಿಸಲು ಸಾಧ್ಯ. ಆ ನಿಟ್ಟಿನಲ್ಲಿ ವಾಟ್ಸಾಪ್ ಸಂದೇಶಗಳಿಗೆ ಕಿವಿಗೊಡದೆ ಅಭಿವೃದ್ಧಿಯತ್ತ ಗಮನಹರಿಸಬೇಕು ಎಂದರು.
ಕೊಡಗು ಜಿಲ್ಲೆಯಲ್ಲಿ ಅನಾದಿಕಾಲದಿಂದಲೂ ವಾಸ ಮಾಡಿಕೊಂಡು ಬಂದಿರುವ ಎಲ್ಲರೂ ಅನ್ಯೋನ್ಯತೆಯಿಂದ ಬದುಕು ನಡೆಸಬೇಕು. ಯಾವುದೇ ಜಾತಿ, ಧರ್ಮ, ಭಾಷಿಕರನ್ನು ಗೌರವಿಸಬೇಕು. ಕಹಿಯನ್ನು ಮರೆತು ಸ್ನೇಹಿತರಂತೆ ಬದುಕು ನಡೆಸಬೇಕು ಎಂದು ಧರ್ಮಜ ಉತ್ತಪ್ಪ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ ಪ್ರಕಾಶ್ ಅವರು ಮಾತನಾಡಿ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯಕ್ಕೆ ತನ್ನದೇ ಆದ ಇತಿಹಾಸವಿದೆ. ಆ ನಿಟ್ಟಿನಲ್ಲಿ ಅರೆಭಾಷೆ ಸಂಸ್ಕøತಿ, ಸಾಹಿತ್ಯ ಪರಂಪರೆಯನ್ನು ಉಳಿಸಿಕೊಂಡು ಹೋಗಬೇಕು ಎಂದರು.
ಅರೆಭಾಷೆಗೆ 1500 ವರ್ಷಗಳ ಇತಿಹಾಸವಿದ್ದು, ಅರೆಭಾಷೆ ಸಂಸ್ಕøತಿ, ಸಾಹಿತ್ಯ ಪರಂಪರೆಯನ್ನು ಬೆಳೆಸುವಲ್ಲಿ ಗಡಿ ಪ್ರರ್ದೇಶಗಳಲ್ಲಿಯೂ ಸಹ ಗಡಿನಾಡ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.ಭಾಗಮಂಡಲ ಗ್ರಾ.ಪಂ.ಅಧ್ಯಕ್ಷರಾದ ಕಾಳನ ರವಿ ಅವರು ಮಾತನಾಡಿ ಎರಡು ವರ್ಷಗಳ ಹಿಂದೆ ಭಾಗಮಂಡಲದಲ್ಲಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಮನವಿ ಮಾಡಲಾಗಿತ್ತು. ಆ ನಿಟ್ಟಿನಲ್ಲಿ ಇಂದು ಅಕಾಡೆಮಿ ವತಿಯಿಂದ ಅರೆಭಾಷೆ ಗಡಿನಾಡ ಉತ್ಸವ ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಇದಕ್ಕೆ 2 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿರುವುದೇ ಸಾಕ್ಷಿಯಾಗಿದೆ ಎಂದರು.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ ಅವರು ಮಾತನಾಡಿ ಅರೆಭಾಷೆ ಅಕಾಡೆಮಿ ಸ್ಥಾಪನೆಗೆ ಹಲವರು ಪ್ರಯತ್ನಿಸಿದ್ದಾರೆ. ಆ ನಿಟ್ಟಿನಲ್ಲಿ ಅಕಾಡೆಮಿ ವತಿಯಿಂದ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯವನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದರು.ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಕೊಲ್ಯದ ಗಿರೀಶ್ ಅವರು ಮಾತನಾಡಿ ಅರೆಭಾಷೆ ಐನ್‍ಮನೆ ಸಂಸ್ಕøತಿ, ಸಾಂಸ್ಕøತಿಕ ಸಮಾವೇಶ, ಹಿಂಗಾರ ತ್ರೈಮಾಸಿಕ ಪತ್ರಿಕೆ ತರುವುದು, ಸಾಕ್ಷ್ಯಚಿತ್ರ ನಿರ್ಮಾಣ, ಆಕಾಶವಾಣಿಯಲ್ಲಿ ಸುದ್ದಿಜೊಂಪೆ ಸುದ್ದಿ ಪ್ರಸಾರ… ಹೀಗೆ ಹಲವು ಚಟುವಟಿಕೆಗಳನ್ನು ಹಮ್ಮಿಕೊಂಡು ಅರೆಭಾಷೆ ಸಂಸ್ಕøತಿಯನ್ನು ಪಸರಿಸುವಲ್ಲಿ ಶ್ರಮಿಸಲಾಗಿದೆ ಎಂದರು.
ಅಕಾಡೆಮಿ ಮಾಜಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರು ಮಾತನಾಡಿ ಕನ್ನಡ, ಇಂಗ್ಲೀಷ್, ಅರೆಭಾಷೆ ನಿಘಂಟು ಸೇರಿದಂತೆ ಹಲವು ಪುಸ್ತಕಗಳನ್ನು ಹೊರತರುವ ಮೂಲಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯವನ್ನು ಎಲ್ಲೆಡೆ ಪಸರಿಸಲು ಶ್ರಮಿಸಲಾಗಿದೆ. ಐಎಸ್‍ಒ ಕೋಡ್ ಪಡೆಯಲು ಪ್ರಯತ್ನಿಸಲಾಗಿದೆ. ಹೀಗೆ ವಿವಿಧ ಚಟುವಟಿಕೆ ಕೈಗೊಳ್ಳುವ ಮೂಲಕ ಅರೆಭಾಷೆ ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತು ಎಂದರು.
ಮತ್ತೊಬ್ಬ ಅಕಾಡೆಮಿ ಮಾಜಿ ಅಧ್ಯಕ್ಷರಾದ ಪಿ.ಸಿ.ಜಯರಾಮ ಅವರು ಮಾತನಾಡಿ ಅರೆಭಾಷೆ ಗಡಿನಾಡ ಉತ್ಸವಕ್ಕೆ ಸಂಗಮದಂತೆ ಇಂದಿನ ಕಾರ್ಯಕ್ರಮಕ್ಕೆ ಸೇರಿರುವುದು ಸಂತಸ ತಂದಿದೆ ಎಂದರು.ಹಾಸನ ಮತ್ತು ಕೊಡಗು ಜಿಲ್ಲೆಯ ಶ್ರೀ ಆದಿಚುಂಚನಗಿರಿ ಶಾಖಾಮಠದ ಶ್ರೀ ಶಂಭುನಾಥ ಸ್ವಾಮೀಜಿಯವರು ಮಾತನಾಡಿ ತಾಯಿ ಭಾಷೆಯನ್ನು ಉಳಿಸಿದಲ್ಲಿ ಸಂಸ್ಕøತಿ ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯವನ್ನು ಉಳಿಸಿ ಬೆಳೆಸಬೇಕು ಎಂದರು.
ಅರೆಭಾಷೆಗೆ ತನ್ನದೇ ಆದ ಇತಿಹಾಸವಿದೆ. ಅದನ್ನು ತಿಳಿಸಬೇಕು. ನಾಡು ಸಂಸ್ಕøತಿ ಇತಿಹಾಸ ತಿಳಿದ್ದಲ್ಲಿ ಮೇಲೆ ಬರಲು ಸಾಧ್ಯ. ಆ ನಿಟ್ಟಿನಲ್ಲಿ ಇತಿಹಾಸವನ್ನು ಸದಾ ಸ್ಮರಿಸಬೇಕು. ಹುಟ್ಟಿದ ನಾಡನ್ನು ಪ್ರೀತಿಸಬೇಕು ಮತ್ತು ಗೌರವಿಸಬೇಕು. ಸಾಹಿತ್ಯ, ಸಂಸ್ಕøತಿ ಶ್ರೀಮಂತವಾಗಬೇಕು ಎಂದರು.ಅರೆಭಾಷೆ ಅಕಾಡೆಮಿ ಸದಸ್ಯರು ಹಾಗೂ ಸಂಚಾಲಕರಾದ ಸೂದನ ಎಸ್.ಈರಪ್ಪ ಅವರು ಮಾತನಾಡಿ ಯಾವುದೇ ಭಾಷೆ, ಸಂಸ್ಕøತಿ, ಪದ್ಧತಿ ಒಂದು ಭಾಷೆಯ ಅಡಿಗಲ್ಲಾಗಿದೆ. ಭಾಷೆ ಉಳಿದರೆ ಸಂಸ್ಕøತಿ, ಸಾಹಿತ್ಯ ಉಳಿದಂತೆ. ಅರೆಭಾಷೆ ಐನ್‍ಮನೆಗಳನ್ನು ಸಂರಕ್ಷಿಸಬೇಕು. ಐನ್‍ಮನೆಗಳ ಮೂಲ ಸ್ವರೂಪ ನಾಶ ಆಗದಂತೆ ಗಮನಹರಿಸಬೇಕು ಎಂದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಹಿರಿಯರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಗ್ಯಾರಂಟಿ ಯೋಜನಾ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಅಮೆ ದಮಯಂತಿ, ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷರಾದ ಕೊಡಪಾಲು ಗಣಪತಿ, ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಭಾಗಮಂಡಲ ನಾಡ ಗೌಡ ಸಮಾಜದ ಅಧ್ಯಕ್ಷರಾದ ಪಿ.ಪಳಂಗಪ್ಪ, ಕರಿಕೆ ಗೌಡ ಸಮಾಜದ ಅಧ್ಯಕ್ಷರಾದ ಕೋಡಿ ಪೊನ್ನಪ್ಪ, ಅಕಾಡೆಮಿ ಸದಸ್ಯರಾದ ಚಂದ್ರಶೇಖರ ಪೆರಾಲು, ತೇಜಕುಮಾರ ಕುಡೆಕಲ್ಲು, ಚಂದ್ರಾವತಿ ಬಡ್ಡಡ್ಕ, ಲತಾ ಪ್ರಸಾದ್ ಕುದ್ಪಾಜೆ, ನಿಡ್ಯಮಲೆ ಡಾ.ಜ್ಞಾನೇಶ್, ಸಂದೀಪ್ ಪೂಳಕಂಡ, ವಿನೋದ್ ಮೂಡಗದ್ದೆ, ಮೋಹನ್ ಪೊನ್ನಚ್ಚನ, ರಿಜಿಸ್ಟ್ರಾರ್ ಚಿನ್ನಸ್ವಾಮಿ ಇತರರು ಇದ್ದರು.
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕರಾದ ಹೊಸೂರು ಜೆ.ಸತೀಶ್ ಕುಮಾರ್ ಸ್ವಾಗತಿಸಿದರು. ಪಟ್ಟಡ ಶಿವಕುಮಾರ್, ಕೆ.ಜೆ.ದಿವಾಕರ, ಲತಾಶ್ರೀ ಮೋಂಟಡ್ಕ ನಿರೂಪಿಸಿದರು. ಭಾಗಮಂಡಲ ನಾಡಗೌಡ ಯುವ ಒಕ್ಕೂಟದ ಅಧ್ಯಕ್ಷರಾದ ಕುದುಕುಳಿ ಕಿಶೋರ್ ಕುಮಾರ್ ವಂದಿಸಿದರು.
ಸುಳ್ಯದ ಶಿವಪ್ರಸಾದ್ ಆಲೆಟ್ಪಿ ಮತ್ತು ಬಳಗದವರಿಂದ ಸಂಗೀತ ರಸಮಂಜರಿ ನಡೆಯಿತು. ಭಾಗಮಂಡಲ ಕರಿಕೆ ಗೇಟ್ ಬಳಿಯಿಂದ ಮೆರವಣಿಗೆಗೆ ಶಂಭುನಾಥ ಸ್ವಾಮೀಜಿ ಅವರು ಚಾಲನೆ ನೀಡಿದರು. ಸುಗ್ಗಿ ಕುಣಿತ, ಕೋಲಾಟ, ಗಮನ ಸೆಳೆಯಿತು. ಪೂರ್ಣಕುಂಭದೊಂದಿಗೆ ಮೆರವಣಿಗೆಯಲ್ಲಿ ಮಹಿಳಾ ಸಂಘಟಕರು ಪಾಲ್ಗೊಂಡಿದ್ದರು. ಮೆರವಣಿಗೆಯಲ್ಲಿ ವೆಂಕಟ್ರಮಣ ಸ್ವಾಮಿ ಸ್ತಬ್ಧಚಿತ್ರದೊಂದಿಗೆ ಕುದುರೆ ಮೆರವಣಿಗೆ ಆಕರ್ಷಣೀಯವಾಗಿತ್ತು. ವಿವಿಧ ವಾದ್ಯ ತಂಡಗಳು ಪಾಲ್ಗೊಂಡಿದ್ದು ವಿಶೇಷವಾಗಿತ್ತು.