ಮನೆ ಸ್ಥಳೀಯ ಮಹಿಷಾ ದಸರಾ, ಚಾಮುಂಡಿ ಬೆಟ್ಟ ಚಲೋ ಎರಡಕ್ಕೂ ಇನ್ನೂ ಅನುಮತಿ ನೀಡಿಲ್ಲ: ಪೊಲೀಸ್ ಆಯುಕ್ತ ಡಾ....

ಮಹಿಷಾ ದಸರಾ, ಚಾಮುಂಡಿ ಬೆಟ್ಟ ಚಲೋ ಎರಡಕ್ಕೂ ಇನ್ನೂ ಅನುಮತಿ ನೀಡಿಲ್ಲ: ಪೊಲೀಸ್ ಆಯುಕ್ತ ಡಾ. ರಮೇಶ್ ಬಾನೋತ್

0

ಮೈಸೂರು: ಮಹಿಷಾ ದಸರಾ  ಮತ್ತು ಇದನ್ನು ವಿರೋಧಿಸಿ ಚಾಮುಂಡಿ ಬೆಟ್ಟ ಚಲೋ  ಎರಡಕ್ಕೂ ಇನ್ನೂ ಅನುಮತಿ ನೀಡಿಲ್ಲ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ರಮೇಶ್ ಬಾನೋತ್ ತಿಳಿಸಿದ್ದಾರೆ.

ಅನುಮತಿ ಕೇಳಿ ಎರಡು ಕಡೆಯಿಂದ ಪೊಲೀಸ್ ಇಲಾಖೆಗೆ ಪತ್ರ ಬಂದಿದೆ. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಾವು ನಿರ್ಧಾರ ಕೈಗೊಳ್ಳುತ್ತೇವೆ. ಇವತ್ತು ಅಥವಾ ನಾಳೆ ಒಳಗೆ ಪೊಲೀಸ್ ಇಲಾಖೆ ನಿರ್ಧಾರ ಏನು ಎಂಬುದು ತಿಳಿಸುತ್ತೇವೆ. ಮೈಸೂರಿನ ಹಿತದೃಷ್ಟಿ ಹಾಗೂ ನಾಡಹಬ್ಬದ ವೈಭೋಗಕ್ಕೆ ಯಾವುದೇ ಧಕ್ಕೆಯಾಗದಂತೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಡಾ. ರಮೇಶ್ ಬಾನೋತ್ ಹೇಳಿದರು.

ಕನ್ನಡದಲ್ಲಿ ಮತ್ತಷ್ಟು ಸುದ್ದಿಗಳನ್ನು ಓದಲು ನಮ್ಮ ಸಾಮಾಜಿಕ ಜಾಲತಾಣದಲ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.