ಬೆಂಗಳೂರು: ಅಮರ್ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಹಿಂದುಳಿದ ವರ್ಗಗಳ 11 ಅಭಿವೃದ್ಧಿ ನಿಗಮಗಳಿಗೆ 569 ಕೋಟಿ ರೂ. ಅನುದಾನವನ್ನು ಮೀಸಲಿಡುವುದಾಗಿ ಸಿಎಂ ಘೋಷಣೆ ಮಾಡಿದರು.
ಗೃಹಬಳಕೆಗೆ ವಿದ್ಯುತ್ ಬಳಸುತ್ತಿರುವ ಕುಟುಂಬದವರು ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ.69,000 ಬೀದಿ ವ್ಯಾಪಾರಿಗಳಿಗೆ 70 ಕೋಟಿ ರೂ. ಸಾಲ ಮಂಜೂರು, ಎಸ್ಸಿ-ಎಸ್ಟಿ ನಿಗಮಗಳಿಗೆ 795 ಕೋಟಿ ರೂ. ಮೀಸಲಿಡುವುದಾಗಿ ಬೊಮ್ಮಾಯಿ ತಿಳಿಸಿದ್ದಾರೆ.