ಮನೆ ಕಾನೂನು ದಾಖಲೆ ನೀಡಲು ಲಂಚ: ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ದಾಖಲೆ ನೀಡಲು ಲಂಚ: ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

0

ಉಡುಪಿ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Join Our Whatsapp Group

ರವಿ ಡಿಲಿಮಾ ಅವರಿಂದ 13,300 ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಲೋಕಾಯುಕ್ತ ಎಸ್‌ಪಿ ನಟರಾಜ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್‌ ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ರಫೀಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇಬ್ಬರಿಗೂ ಜೂನ್ 12ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಹಿಂದಿನ ಲೇಖನಪಕ್ಷಪಾತದ ಆರೋಪ ಬಂದಾಗ ನ್ಯಾಯಾಧೀಶರ ಪ್ರತಿಕ್ರಿಯೆ ಆಲಿಸದೆ ಅವರಿಂದ ಪ್ರಕರಣ ವರ್ಗಾಯಿಸುವಂತಿಲ್ಲ: ದೆಹಲಿ ಹೈಕೋರ್ಟ್
ಮುಂದಿನ ಲೇಖನಡೆತ್ ನೋಟ್​ನಲ್ಲಿ ಸಚಿವರ ಹೆಸರಿದೆ, ಎಫ್​ಐಆರ್ ​ನಲ್ಲಿ ಯಾಕೆ ಹೆಸರಿಲ್ಲ?: ಆರ್ ಅಶೋಕ್  ಪ್ರಶ್ನೆ