ಮನೆ ಕಾನೂನು ಇ- ಸ್ವತ್ತು ಮಾಡಿಕೊಡಲು ಲಂಚ: ಸೊರಬ ಪುರಸಭೆ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಇ- ಸ್ವತ್ತು ಮಾಡಿಕೊಡಲು ಲಂಚ: ಸೊರಬ ಪುರಸಭೆ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

0

ಶಿವಮೊಗ್ಗ: ಇ-ಸ್ವತ್ತು ಮಾಡಿಕೊಡಲು ₹ 40,000 ಲಂಚ ಪಡೆಯುತ್ತಿದ್ದ ಜಿಲ್ಲೆಯ ಸೊರಬ ಪುರಸಭೆಯ ಕಂದಾಯ ನಿರೀಕ್ಷಕ ವಿನಾಯಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಪ್ರತಿಭಾ ನಾಯ್ಕ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ ಅವರ ನೇತೃತ್ವದಲ್ಲಿ ದಾಳಿ ನಡೆಸಿ, ಲಂಚ ಪಡೆಯುವ ವೇಳೆ ಬಂಧಿಸಲಾಗಿದೆ.

ಹಳೆ ಸೊರಬ ಪುರಸಭೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನದ ಇ-ಸ್ವತ್ತು ಮಾಡಿಸಲು ಕಂದಾಯ ಪ್ರತಿಭಾ ಅರ್ಜಿ ಸಲ್ಲಿಸಿದ್ದರು. ಆದರೆ, ಕಂದಾಯ ನಿರೀಕ್ಷಕ ವಿನಯ್, ಲಂಚಕ್ಕೆ ಬೇಡಿಕೆ ಇಟ್ಟಿದ್ದರಿಂದ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಪೊಲೀಸ್ ನಿರೀಕ್ಷಕ ಪ್ರಕಾಶ್‍ ನೇತೃತ್ವದ ತಂಡ ಲಂಚ ಪಡೆಯುವಾಗಲೇ ದಾಳಿ ನಡೆಸಿದರು.

ಲೋಕಾಯುಕ್ತ ಪೊಲೀಸ್ ಜಿಲ್ಲಾ ಉಪಾಧೀಕ್ಷಕ ಉಮೇಶ ಈಶ್ವರ ನಾಯ್ಕ, ಎಚ್.ಎಸ್. ಸುರೇಶ್, ಸಿಬ್ಬಂದಿ ಮಹಾಂತೇಶ, ಸುರೇಂದ್ರ, ಯೋಗೀಶ್, ಬಿ.ಟಿ. ಚನ್ನೇಶ, ಪ್ರಶಾಂತ್‍ಕುಮಾರ್, ಅರುಣ್‍ಕುಮಾರ್, ದೇವರಾಜ, ರಘುನಾಯ್ಕ, ಕೆ.ಸಿ. ಜಯಂತ, ವಿ. ಗೋಪಿ, ಪ್ರದೀಪ್ ಕುಮಾರ್, ಬಿ.ಕೆ. ಗಂಗಾಧರ ಇದ್ದರು.