ಮನೆ ಅಪರಾಧ ಬ್ರಿಜ್‌ ಭೂಷಣ್ ಶರಣ್ ಸಿಂಗ್  ಪುತ್ರನ ಬೆಂಗಾವಲು ವಾಹನ ಡಿಕ್ಕಿ: ಇಬ್ಬರ ಸಾವು

ಬ್ರಿಜ್‌ ಭೂಷಣ್ ಶರಣ್ ಸಿಂಗ್  ಪುತ್ರನ ಬೆಂಗಾವಲು ವಾಹನ ಡಿಕ್ಕಿ: ಇಬ್ಬರ ಸಾವು

0

ಲಖನೌ: ಭಾರತ ಕುಸ್ತಿ ಫೆಡರೇಷನ್‌ ನ (ಡಬ್ಲ್ಯುಎಫ್ ಐ) ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್ ಶರಣ್ ಸಿಂಗ್ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಅವರ ಬೆಂಗಾವಲು ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Join Our Whatsapp Group

ಗೊಂಡಾ ಜಿಲ್ಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಚಟೈಪುರ್ ಗ್ರಾಮದ ಬಳಿ ವೇಗವಾಗಿ ಬಂದ ಕಾರು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದ್ದಾರೆ.

ಮೃತರನ್ನು ರೆಹಾನ್ ಖಾನ್ ಮತ್ತು ಶೆಹಜಾದ್ ಖಾನ್ ಎಂದು ಗುರುತಿಸಲಾಗಿದೆ. ಶೆಹಜಾದ್ ಖಾನ್ ಗಲ್ಫ್ ರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದು, ಎರಡು ದಿನಗಳ ಹಿಂದಷ್ಟೇ ಮನೆಗೆ ಬಂದಿದ್ದ ಎನ್ನಲಾಗಿದೆ.

ಘಟನೆ ಸಂಬಂಧ ಕರ್ನೈಲ್‌ಗಂಜ್ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ನಂತರ ಪರಾರಿಯಾಗಿರುವ ಯತ್ನಿಸಿದ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರಣ್ ಭೂಷಣ್ ಸಿಂಗ್ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಮೇ 20ರಂದು ಮತದಾನ ನಡೆದಿತ್ತು.