ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ಅರ್ಬನ್ ಪ್ಲ್ಯಾನರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ ಲೈನ್/ ಪೋಸ್ಟ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ತಡಮಾಡದೇ ಈಗಲೇ ಅರ್ಜಿ ಹಾಕಿ.
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಅರ್ಬನ್ ಪ್ಲ್ಯಾನಿಂಗ್/ ಆರ್ಕಿಟೆಕ್ಚರ್/ ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳ:
ಬೆಳಗಾವಿ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ವ್ಯವಸ್ಥಾಪಕ ನಿರ್ದೇಶಕರು
ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್
ಬೆಳಗಾವಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 7, 2023