ಮನೆ ರಾಷ್ಟ್ರೀಯ ಬಿಎಸ್‌ ಪಿ ತಮಿಳುನಾಡು ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ: 8 ಶಂಕಿತರ ಬಂಧನ

ಬಿಎಸ್‌ ಪಿ ತಮಿಳುನಾಡು ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ: 8 ಶಂಕಿತರ ಬಂಧನ

0

ಚೆನ್ನೈ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತಮಿಳುನಾಡು ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ಶುಕ್ರವಾರ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಶಂಕಿತರನ್ನು ಬಂಧಿಸಲಾಗಿದೆ.

Join Our Whatsapp Group

ಈ ಬೆಳವಣಿಗೆಯನ್ನು ಚೆನ್ನೈ ಹೆಚ್ಚುವರಿ ಆಯುಕ್ತ (ಉತ್ತರ) ಆಸ್ರಾ ಗರ್ಗ್ ಐಪಿಎಸ್ ಅವರು ಖಚಿತಪಡಿಸಿದ್ದಾರೆ.

ಹತ್ಯೆಯ ಹಿಂದಿನ ಉದ್ದೇಶವನ್ನು ಖಚಿತಪಡಿಸಿಕೊಳ್ಳಲು ಬಂಧಿತರನ್ನು ಕೂಲಂಕಷವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಆರ್ಮ್‌ಸ್ಟ್ರಾಂಗ್ ಅವರನ್ನು ಕೊಂದ ನಂತರ ಕೊಲೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿರುವ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದೆ.

ಆರ್ಮ್‌ಸ್ಟ್ರಾಂಗ್ ಅವರನ್ನು ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿನ ಅವರ ನಿವಾಸದ ಬಳಿ ಆರು ಅಪರಿಚಿತ ಜನರು ಕಡಿದು ಕೊಂದಿದ್ದಾರೆ. ಆರಂಭಿಕ ವರದಿಗಳ ಪ್ರಕಾರ ಬೈಕ್‌ನಲ್ಲಿ ಬಂದ ಅಪರಿಚಿತ ಗುಂಪು ಆರ್ಮ್‌ಸ್ಟ್ರಾಂಗ್ ಮೇಲೆ ಚಾಕುವಿನಿಂದ ದಾಳಿ ಮಾಡಿದೆ.

ದಾಳಿಯ ನಂತರ, ಆರ್ಮ್‌ಸ್ಟ್ರಾಂಗ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ರಾಜಕಾರಣಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ.