ಬೆಂಗಳೂರು(Bengaluru): ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಮಾಜಿ ಮುಖ್ಯಮಂತ್ರಿ, ಬಿಜೆಪಿ ಶಾಸಕ ಬಿ.ಎಸ್. ಯಡಿಯೂರಪ್ಪ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಇಂದು ವಿಧಾನಸಭೆ ಕಲಾಪ ಮುಗಿದ ಬಳಿಕ ಪದ್ಮನಾಭ ನಗರದ ನಿವಾಸಕ್ಕೆ ತೆರಳಿದ ಯಡಿಯೂರಪ್ಪ ಅವರು ದೇವೇಗೌಡರನ್ನು ಭೇಟಿಯಾಗಿದ್ದಾರೆ.
ಯಡಿಯೂರಪ್ಪ ಅವರ ಜೊತೆ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಸೇರಿದಂತೆ ಕೆಲ ಮುಖಂಡರು ಇದ್ದರು.
ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸೋಮವಾರ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.














