ಮನೆ ರಾಜಕೀಯ ಬಿಎಸ್’ವೈ ನನ್ನ ಮೇಲಿನ ಪ್ರೀತಿಯಿಂದ ಬಾದಾಮಿಯಲ್ಲಿ ಸ್ಪರ್ಧಿಸಲು ಹೇಳಿದ್ದಾರೆ: ಸಿದ್ದರಾಮಯ್ಯ

ಬಿಎಸ್’ವೈ ನನ್ನ ಮೇಲಿನ ಪ್ರೀತಿಯಿಂದ ಬಾದಾಮಿಯಲ್ಲಿ ಸ್ಪರ್ಧಿಸಲು ಹೇಳಿದ್ದಾರೆ: ಸಿದ್ದರಾಮಯ್ಯ

0

ವಿಜಯಪುರ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನ ಮೇಲಿನ ಪ್ರೀತಿಯಿಂದ ಮುಂದಿನ ಚುನಾವಣೆಯಲ್ಲಿ ಬಾದಾಮಿಯಿಂದಲೇ ಸ್ಪರ್ಧೆ ಮಾಡುವಂತೆ ಸಲಹೆ ನೀಡಿದ್ದಾರೆ. ಅವರ ಸಲಹೆಗೆ ಧನ್ಯವಾದ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ನನ್ನ ಹಿತೈಷಿಯಂತಿರುವ ಯಡಿಯೂರಪ್ಪನವರಿಗೆ ದೇವರು ದೀರ್ಘ ಆಯಸ್ಸು, ಆರೋಗ್ಯ ಕರುಣಿಸಲಿ ಎಂದು ಹಾರೈಸಿದರು.

ಕಳೆದ 5 ವರ್ಷಗಳಿಂದ ಬಾದಾಮಿಯ ಶಾಸಕನಾಗಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು, ಕ್ಷೇತ್ರದ ಜನರ ಕಷ್ಟ ಸುಖಕ್ಕೆ ನೀಡಿದ ಸ್ಪಂದನೆಯೇ ಅಲ್ಲಿ ನನ್ನನ್ನು ಗರಿಷ್ಠ ಮತಗಳ ಅಂತರದಿಂದ ಗೆಲ್ಲಿಸಲಿದೆ ಎಂಬ ಪೂರ್ಣ ಭರವಸೆ ನನಗಿದೆ. ಸೋಲುವ ಭಯದಿಂದ ಬಾದಾಮಿಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ ಎಂಬುದು ಕೆಲವರ ಭ್ರಮೆ ಅಷ್ಟೆ ಎಂದು ಟೀಕಾಕಾರರಿಗೆ ತಿರುಗೇಟು ನೀಡಿದರು.

ಮತ್ತೆ ಬಾದಾಮಿಯಿಂದಲೇ ಸ್ಪರ್ಧಿಸಿ ಶಾಸಕನಾದರೆ ವಾರಕ್ಕೊಮ್ಮೆಯಾದರೂ ಕ್ಷೇತ್ರಕ್ಕೆ ಭೇಟಿಕೊಟ್ಟು, ಜನರ ಕಷ್ಟದಲ್ಲಿ ಭಾಗಿಯಾಗಬೇಕು, ಅಭಿವೃದ್ಧಿ ಕಾರ್ಯಗಳ ಉಸ್ತುವಾರಿ ನೋಡಿಕೊಳ್ಳಬೇಕು. ಆದರೆ ವಯಸ್ಸು 75 ದಾಟಿದೆ, ದೂರದ ಪ್ರಯಾಣ ಕಷ್ಟವೆನಿಸಿ ಬೆಂಗಳೂರಿಗೆ ಸಮೀಪದ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ಕಳೆದ 5 ವರ್ಷದಿಂದ ಬಾದಾಮಿ ಕ್ಷೇತ್ರ ಹಿಂದೆಂದೂ ಕಾಣದ ಅಭಿವೃದ್ಧಿ ಕಾರ್ಯಗಳನ್ನು ಕಂಡಿದೆ. ನನಗೆ ಮತ ನೀಡಿ ಗೆಲ್ಲಿಸಿದ ಬಾದಾಮಿ ಜನರ ನಂಬಿಕೆಗೆ ಈ 5 ವರ್ಷಗಳಲ್ಲಿ ಚ್ಯುತಿ ಬಾರದಂತೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂಬ ಸಂತೃಪ್ತಿ ನನಗಿದೆ. ಬಾದಾಮಿಯ ಜನರ ಪ್ರೀತಿಗೆ ನಾನು ಸದಾ ಋಣಿ ಎಂದು ತಿಳಿಸಿದರು.

ಹಿಂದಿನ ಲೇಖನ‘ಬ್ರಹ್ಮಚಾರಿಗಳ ನಡಿಗೆ ಮಲೆಮಾದಪ್ಪನೆಡೆಗೆ’: ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟ ಅವಿವಾಹಿತರು
ಮುಂದಿನ ಲೇಖನಶಿಕ್ಷಕರಿಗೆ ಪಿಂಚಣಿ: ಎನ್’ಪಿಎಸ್ಅನ್ನು ಒಪಿಎಸ್ ಆಗಿ ಪರಿವರ್ತಿಸಲು ಕ್ರಮ- ಸಿಎಂ ಬೊಮ್ಮಾಯಿ