ಮನೆ ರಾಜ್ಯ ತಿಗಣೆ ಔಷಧಿ ವಾಸನೆಗೆ ಬಿಟೆಕ್ ವಿದ್ಯಾರ್ಥಿ ಬಲಿ

ತಿಗಣೆ ಔಷಧಿ ವಾಸನೆಗೆ ಬಿಟೆಕ್ ವಿದ್ಯಾರ್ಥಿ ಬಲಿ

0

ಬೆಂಗಳೂರು : ಹೆಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪಿಜಿಯೊಂದರಲ್ಲಿ ತಿಗಣೆ ಔಷಧಿ ವಾಸನೆಗೆ ಬಿಟೆಕ್ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಮೃತನನ್ನು ತಿರುಪತಿ ಮೂಲದ ಪವನ್ ಎಂದು ಗುರುತಿಸಲಾಗಿದೆ.

ಆತ ಒಂದು ವಾರದ ಹಿಂದೆ ಊರಿಗೆ ಹೋಗಿದ್ದ. ಈ ಸಮಯದಲ್ಲಿ ತಿಗಣೆ ಔಷಧ ಸಿಂಪಡಿಸಿ ರೂಮ್‌ ಬಂದ್‌ ಮಾಡಲಾಗಿತ್ತು. ಈ ಬಗ್ಗೆ ಮಾಹಿತಿ ಇಲ್ಲದೇ ಪವನ್ ರೂಮ್‌ಗೆ ಪ್ರವೇಶಿಸಿ ಮಲಗಿದ್ದ. ‌

ಬೆಳಗ್ಗೆ ವೇಳೆಗೆ ಆತ ಅಸ್ವಸ್ಥನಾಗಿದ್ದ. ಪರಿಶೀಲಿಸಿದಾಗ ಆತ ಮೃತಪಟ್ಟಿರುವುದು ಗೊತ್ತಾಗಿದೆ. ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಎಎಲ್‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.