ಮನೆ ಅಪರಾಧ ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು

ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು

0

ಬೆಳ್ತಂಗಡಿ: ಇಲ್ಲಿನ‌ ಪುತ್ರ ಬೈಲು ಸಮೀಪ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಲಾಯಿಲದಲ್ಲಿ ಜೂ.28ರ ಬೆಳಗ್ಗೆ ಸಂಭವಿಸಿದೆ.

Join Our Whatsapp Group

ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬೆಳ್ತಂಗಡಿ ಕಡೆಯಿಂದ ತೆರಳುತ್ತಿದ್ದ ಬೈಕ್ ಮಧ್ಯೆ ಪುತ್ರಬೈಲು ಎಂಬಲ್ಲಿ ಅಪಘಾತ ಸಂಭವಿಸಿದೆ.

ಅಪಘಾತದ ಪರಿಣಾಮ ತೀವ್ರ ಗಾಯಗೊಂಡ ಬಳಂಜ ನಿವಾಸಿ, ನಡ ಗ್ರಾಮದ ಕರಣಿಕರ ಕಚೇರಿ ಸಹಾಯಕ ಜಯರಾಜ್ (45) ಆಸ್ಪತ್ರೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಸಹಿತ ತಾಲೂಕು ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಹಿಂದಿನ ಲೇಖನನಮ್ಮ ಕುಟುಂಬದ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ: ಡಿ.ಕೆ. ಶಿವಕುಮಾರ್
ಮುಂದಿನ ಲೇಖನವಿವಾಹದ ಸುಳ್ಳು ಭರವಸೆ: ಪುರುಷರ ವಿರುದ್ಧ ಕಾನೂನು ದುರುಪಯೋಗವಾಗದಂತೆ ನೋಡಿಕೊಳ್ಳಬೇಕು ಎಂದ ಮದ್ರಾಸ್ ಹೈಕೋರ್ಟ್