ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬಸ್ ವೊಂದು 200 ಅಡಿ ಆಳದ ಕಣಿವೆಗೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 25 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ಭಾಲೆಸ್ಸಾದಿಂದ ಥಾತ್ರಿಗೆ ತೆರಳುತ್ತಿದ್ದಾಗ ಬೆಳಿಗ್ಗೆ 11 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದಿದೆ.
ಘಟನೆಯಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಾಯಾಳುಗಳಿಗೆ ದೋಡಾದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಅವರು ಹೇಳಿದ್ದಾರೆ.
Saval TV on YouTube