ಮನೆ ರಾಜ್ಯ ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌ – ಹಲವರಿಗೆ ಗಾಯ

ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌ – ಹಲವರಿಗೆ ಗಾಯ

0

ಶಿವಮೊಗ್ಗ : ಭದ್ರಾವತಿಯ ಕಾಗೇಹಳ್ಳದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಈ ಅಪಘಾತದಲ್ಲಿ ಮೂವರು ಪ್ರಯಾಣಿಕರ ಕೈ, ಕಾಲು ಮುರಿದಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ದಾವಣಗೆರೆಯಿಂದ ಭದ್ರಾವತಿಗೆ ಬಸ್ ಬರುತ್ತಿತ್ತು. ಕಾಗೇಹಳ್ಳದ ಬಳಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ. ಇಂದು (ಮಾ.30) ಮಧ್ಯಾಹ್ನ ಸುಮಾರು 12:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಈ ಸ್ಥಳಕ್ಕೆ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಾಲಕನ ಅತಿ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.