ಮನೆ ರಾಷ್ಟ್ರೀಯ ಹರಿಯಾಣದಲ್ಲಿ ಬಸ್ ಪಲ್ಟಿ: 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

ಹರಿಯಾಣದಲ್ಲಿ ಬಸ್ ಪಲ್ಟಿ: 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

0

ಹರಿಯಾಣ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಪರಿಣಾಮ ನಲ್ವತ್ತು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಹರಿಯಾಣದ ಪಂಚಕುಲ ಜಿಲ್ಲೆಯ ಪಿಂಜೋರ್ ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ.

Join Our Whatsapp Group

ಗಾಯಗೊಂಡವರನ್ನು ಪಿಂಜೋರ್ ಮತ್ತು ಪಂಚಕುಲದ ಸೆಕ್ಟರ್ 6 ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಘಟನೆಯಲ್ಲಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಮಾಹಿತಿ ಪ್ರಕಾರ ಶಾಲಾಮಕ್ಕಳು ಸೇರಿದಂತೆ ಬಸ್ಸಿನಲ್ಲಿ ಸುಮಾರು ಎಪ್ಪತ್ತು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ ಚಾಲಕನ ಅತೀ ವೇಗ ಮತ್ತು ಕಳಪೆ ರಸ್ತೆಯ ಪರಿಣಾಮ ಬಸ್ಸು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ.

ಘಟನೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.