ರಾಯಚೂರು(Raichuru): ಸಾರಿಗೆ ಸಂಸ್ಥೆ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಾದ ತಂದೆ, ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ವಂದಲಿ-ಹೊಸೂರು ಗ್ರಾಮ ಬಳಿ ಜರುಗಿದೆ.
ವಂದಲಿ-ಹೊಸೂರು ಗ್ರಾಮದ ತಂದೆ ರಮೇಶ ಹಾಗೂ ಮಗ ಅಮರೇಶ ಮೃತರು. ಅಪ್ಪ-ಮಗ ಇಬ್ಬರೂ ತಮ್ಮ ಮನೆಯಲ್ಲಿರುವ ಜಾನುವಾರುಗಳಿಗೆ ಮೇವು ತರಲು ಬೈಕ್ನಲ್ಲಿ ಹೊಲಕ್ಕೆ ತೆರಳಿದ್ದರು. ಮೇವು ತೆಗೆದುಕೊಂಡು ವಾಪಸ್ ಮನೆಗೆ ಬರುವಾಗ ಬೈಕ್ಗೆ ಬಸ್ ಡಿಕ್ಕಿ ಹೊಡೆದಿದೆ.
ಈ ಕುರಿತು ಘಟನಾ ಸ್ಥಳಕ್ಕೆ ಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.