ಮನೆ ರಾಷ್ಟ್ರೀಯ 6 ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ: ಮತದಾನ ಆರಂಭ

6 ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ: ಮತದಾನ ಆರಂಭ

0

ನವದೆಹಲಿ(Newdelhi): ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಇಂದು ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.

ಬಿಹಾರದಲ್ಲಿ ಎರಡು ಮತ್ತು ಮಹಾರಾಷ್ಟ್ರ, ಹರಿಯಾಣ, ತೆಲಂಗಾಣ, ಉತ್ತರ ಪ್ರದೇಶ ಮತ್ತು ಒಡಿಶಾ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದೆ.

ಬಿಹಾರದ ಮೊಕಾಮಾ ಮತ್ತು ಗೋಪಾಲ್‌ಗಂಜ್, ಮಹಾರಾಷ್ಟ್ರದ ಅಂಧೇರಿ (ಪೂರ್ವ), ಹರಿಯಾಣದ ಆದಂಪುರ, ತೆಲಂಗಾಣದ ಮುನುಗೋಡು, ಉತ್ತರ ಪ್ರದೇಶದ ಗೋಲಾ ಗೋರಖ್‌ನಾಥ್ ಮತ್ತು ಒಡಿಶಾದ ಧಾಮ್‌ನಗರ ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ.

ಮತದಾನಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಪಚುನಾವಣೆಯ ಫಲಿತಾಂಶವು ನವೆಂಬರ್ 6ರಂದು ಪ್ರಕಟಗೊಳ್ಳಲಿದೆ.

ಪ್ರಮುಖವಾಗಿ ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಉಪಚುನಾವಣೆ ನಡೆಯುತ್ತಿರುವ ಏಳು ಸ್ಥಾನಗಳಲ್ಲಿ ಕಳೆದ ಬಾರಿ ಬಿಜೆಪಿ ಮೂರು, ಕಾಂಗ್ರೆಸ್ ಎರಡು, ಶಿವಸೇನಾ ಮತ್ತು ಆರ್‌ಜೆಡಿ ತಲಾ ಒಂದು ಸ್ಥಾನಗಳಲ್ಲಿ ಗೆಲುವು ದಾಖಲಿಸಿತ್ತು.

ಹಿಂದಿನ ಲೇಖನಸ್ಟೀಲ್ ಅಥಾರಿಟಿ ಆಫ್ ಇಂಡಿಯಾ: ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಮುಂದಿನ ಲೇಖನಧಾರ್ಮಿಕ ಭಾವನೆಗೆ ಧಕ್ಕೆ: ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಜಾಮೀನು ರಹಿತ ವಾರೆಂಟ್