ಬೆಂಗಳೂರು : ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ. ಆಂತರಿಕ ಭಿನ್ನಾಭಿಪ್ರಾಯ ಹೆಚ್ಚುತ್ತಲೇ ಇದೆ. ಈ ಮಧ್ಯೆ ಕುಮಾರ್ ಬಂಗಾರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರಗೆ ನೇರವಾಗಿಯೇ ಟಕ್ಕರ್ ಕೊಟ್ಟಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಮುಂದುವರೆಯಬಾರದು ಎನ್ನುವ ನಿಲುವಿನಲ್ಲಿ ಈಗಲೂ ನಾವಿದ್ದೇವೆ ಎಂದು ಬಿಜೆಪಿ ರೆಬಲ್ ನಾಯಕ ಕುಮಾರ್ ಬಂಗಾರಪ್ಪ ಹೇಳಿದ್ದಾರೆ.
ಸಚಿವ ಸೋಮಣ್ಣನವರು ನಮಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಹಕಾರ ಕೊಡಿ ಅಂತ ಕೇಳಿಲ್ಲ. ದಾವಣಗೆರೆ ವಿಚಾರಕ್ಕೆ ಸಿದ್ದೇಶ್ವರ್, ಹರೀಶ್ ಅವರನ್ನು ಸೋಮಣ್ಣ ಅವರು ಭೇಟಿಯಾಗಿದ್ದಾರೆ ಅಷ್ಟೇ ಎಂದು ತಿಳಿಸಿದರು.
ಬಿಜೆಪಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕಾದರೆ ವಿಜಯೇಂದ್ರ ಬದಲಾವಣೆಯಾಗಬೇಕು. ನಮ್ಮ ಅಭಿಪ್ರಾಯ ಹೇಳಿದ್ದೇವೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ನೋಡೋಣ. ನಮ್ಮ ಅಭಿಪ್ರಾಯ, ನಮ್ಮ ನಿಲುವನ್ನು ನಾವು ಹೇಳಿದ್ದೇವೆ. ಕರ್ನಾಟಕದ ಕಾರ್ಯಕರ್ತರಿಗೂ ಈ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು ಎನ್ನುವ ಭಾವನೆಯಿದೆ ಎಂದು ಹೇಳಿದರು.















