ಮನೆ ರಾಜ್ಯ ಸಿ.ಜೆ ರಾಯ್ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ‍್ಯಾಂಡ್‌ನಲ್ಲಿ ಅಂತ್ಯಕ್ರಿಯೆ..!

ಸಿ.ಜೆ ರಾಯ್ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ‍್ಯಾಂಡ್‌ನಲ್ಲಿ ಅಂತ್ಯಕ್ರಿಯೆ..!

0

ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಡಾ.ಸಿಜೆ ರಾಯ್ ಅವರಿಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ‍್ಯಾಂಡ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಹಿತಿ ಲಭ್ಯವಾಗಿದೆ. ತಮ್ಮ ಆಪ್ತರ ಬಳಿ ಈ ಹಿಂದೆ ವ್ಯಕ್ತಪಡಿಸಿದ್ದ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ‍್ಯಾಂಡ್‌ನಲ್ಲಿ ಡಾ.ಸಿ.ಜೆ. ರಾಯ್ ಅವರ ಅಂತ್ಯಸಂಸ್ಕಾರ ನಡೆಯಲಿದೆ.

ವೈಟ್ ಗೋಲ್ಡ್ ಸಂಸ್ಥೆಯ ಮಾಲೀಕ, ಸಹೋದರ ಬಾಬು ಜೋಸೆಫ್ ಒಡೆತನದ ಕೋರಮಂಗಲದ ವೈಟ್ ಹೌಸ್‌ನಲ್ಲಿ ಮೃತ ರಾಯ್ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಇಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸಿ.ಜೆ. ರಾಯ್ ಅವರ ಅಂತ್ಯಕ್ರಿಯೆಯು ಇಂದು (ಜ.31) ಸಂಜೆ ಬನ್ನೇರುಘಟ್ಟದ ಕಾಸಾಗ್ರ‍್ಯಾಂಡ್‌ನಲ್ಲಿ ನೆರವೇರುವ ಸಾಧ್ಯತೆಯಿದ್ದು, ನಾಡಿನ ಪ್ರಮುಖ ಉದ್ಯಮಿಗಳು, ಸಿನಿಮಾ ತಾರೆಯರು ಮತ್ತು ರಾಜಕಾರಣಿಗಳು ಭಾಗವಹಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.