ಮನೆ Uncategorized ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನಕ್ಕೆ ಒತ್ತಾಯ

ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನಕ್ಕೆ ಒತ್ತಾಯ

0
Oplus_131072

ಯಳಂದೂರು: ಚಾಮರಾಜನಗರ ವಿಧಾನ ಸಭಾ ಕ್ಷೇತ್ರದಿಂದ ಸತತ ೪ ಬಾರಿ ಶಾಸಕರಿಗೆ ಆಯ್ಕೆಯಾಗುವ ಮೂಲಕ ದಾಖಲೆ ಸೃಷ್ಟಿಸಿರುವ ಸಿ. ಪುಟ್ಟರಂಗಶೆಟ್ಟಿರವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನವನ್ನು ನೀಡಬೇಕು ಎಂದು ಯಳಂದೂರು ತಾಲೂಕು ಸಿ. ಪುಟ್ಟರಂಗಶೆಟ್ಟಿ ಅಭಿಮಾನಿ ಬಳಗದ ತಾಲೂಕು ಅಧ್ಯಕ್ಷ ಯರಿಯೂರು ಕಿರಣ್ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಉಪ್ಪಾರ ಜನಾಂಗದ ಏಕೈಕ ಶಾಸಕರಾದ ಸಿ. ಪುಟ್ಟರಂಗಶೆಟ್ಟಿರವರು ರಾಜ್ಯಾದ್ಯಂತ ಪ್ರವಾಸ ಮಾಡಿ ಸಮುದಾಯದ ಜನಾಂಗವನ್ನು ಒಗ್ಗೂಡಿಸಿ ಕಾಂಗ್ರೆಸ್ ಪಕ್ಷವನ್ನು ಹಲವು ಕಡೆ ಗೆಲುವಿನ ದಡ ಸೇರಿಸಿದ್ದಾರೆ. ಅಲ್ಲದೆ ಉಪ್ಪಾರ ಸಮಾಜ ಮತದಾರರು ಹೆಚ್ಚು ಇರುವ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಹಲವು ಕಡೆ ಕಾಂಗ್ರೆಸ್ ಪಕ್ಷದ ಗೆಲುವಿನಡೆಗೆ ತರುವಲ್ಲಿ ಅಪಾರ ಶ್ರಮವನ್ನು ಹಾಕಿದ್ದಾರೆ. ೨೦೦೮ ರಲ್ಲಿ ಪ್ರಥಮ ಬಾರಿಗೆ ಶಾಸಕರಾಗಿ ಆಯ್ಕೆಯಾದ ಇವರು ನಿರಂತರವಾಗಿ ಶಾಸಕರಾಗಿ ೪ ಬಾರಿ ಗೆದ್ದಿದ್ದಾರೆ. ಅಲ್ಲದೆ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಸಾವಿರಾರು ಕೋಟಿ ರೂ. ಅನುದಾನ ಬರಲು ಕಾರಣರಾಗಿದ್ದಾರೆ. ಕ್ಷೇತ್ರದಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಲು, ಸಿಮ್ಸ್ ಸ್ಥಾಪನೆಗೆ, ಚಾಮುಲ್ ಸೇರಿದಂತೆ ಅನೇಕ ಜನಪರ ಶಾಶ್ವತವಾದ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಇಂದು ಸಾವಿರಾರು ಮಂದಿಗೆ ಇದರಿಂದ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಯಾಗಿದೆ.

ಉಪ್ಪಾರ ಸಮುದಾಯದ ಜನರು ರಾಜ್ಯಾದ್ಯಂತ ಲಕ್ಷಾಂತರ ಮಂದಿ ಇದ್ದಾರೆ. ಆದೆ ಇವರನ್ನು ಪ್ರತಿನಿಧಿಸಿ ಗೆದ್ದಿರುವ ಐಕೈಕ ಶಾಸಕರಾಗಿರುವ ಇವರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯವನ್ನು ನೀಡುವ ಮೂಲಕ ಉಪ್ಪಾರ ಜನರಿಗೂ ಸಾಮಾಜಿಕ ನ್ಯಾಯವನ್ನು ಒದಗಿಸಬೇಕು ಇದಕ್ಕೆ ಸಂಬಂಧಿಸಿದಂತೆ ನಮ್ಮ ಬಳಗದ ವತಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರನ್ನು ಶೀಘ್ರದಲ್ಲೇ ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದು ಇವರು ತಿಳಿಸಿದರು.