ಮನೆ ರಾಜ್ಯ ಸಿ.ಪುಟ್ಟರಂಗಶೆಟ್ಟಿಗೆ ಕೈತಪ್ಪಿದ ಸಚಿವ ಸ್ಥಾನ: ಅಭಿಮಾನಿಗಳ ಆಕ್ರೋಶ

ಸಿ.ಪುಟ್ಟರಂಗಶೆಟ್ಟಿಗೆ ಕೈತಪ್ಪಿದ ಸಚಿವ ಸ್ಥಾನ: ಅಭಿಮಾನಿಗಳ ಆಕ್ರೋಶ

0

ಚಾಮರಾಜನಗರ: ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಅವಕಾಶ ಕೈತಪ್ಪಿದ ಹಿನ್ನಲೆಯಲ್ಲಿ ಜಿಲ್ಲೆಯ ಉಪ್ಪಾರ ಸಮಾಜದ ಮುಖಂಡರು, ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Our Whatsapp Group

ನಗರದಲ್ಲಿ ಶನಿವಾರ ದಿಢೀರ್ ಪ್ರತಿಭಟನೆ ನಡೆಸಿದ ಸಮಾಜದವರು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರಹಾಕಿದರು.

ಉಪ್ಪಾರ ಸಮಾಜದ ಏಕೈಕ ಶಾಸಕರಾಗಿರುವ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ್ದರು. ಕೊನೆ ಕ್ಷಣದಲ್ಲಿ ಅವರ ಹೆಸರನ್ನು ಕೈಬಿಟ್ಟು ಸಮಾಜಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಮುಖಂಡರು ಆರೋಪಿಸಿದರು.

ರಾಜ್ಯದಲ್ಲಿ ಉಪ್ಪಾರರು 40 ಲಕ್ಷದಷ್ಟು ಜನರಿದ್ದಾರೆ. ಅವರ ಪ್ರತಿನಿಧಿಯಾಗಿ ಪುಟ್ಟರಂಗಶೆಟ್ಟಿ ಒಬ್ಬರೇ‌ ಇದ್ದಾರೆ. ನಾಲ್ಕು ಬಾರಿ ಶಾಸಕರಾಗಿದ್ದಾರೆ. ಅವರಿಗೆ ಸಚಿವ ಸ್ಥಾನ‌ ನೀಡದಿದ್ದರೆ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಾನಿಯಾಗಬಹುದು. ಕೊಟ್ಟ‌ ಭರವಸೆಯಂತೆ ಅವರನ್ನು ಸಚಿವರನ್ನಾಗಿ ಮಾಡಬೇಕು. ಇಲ್ಲದಿದ್ದರೆ ಸೋಮವಾರ ಚಾಮರಾಜನಗರ‌ ಬಂದ್ ಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು.

ಆತ್ಮಹತ್ಯೆ ಬೆದರಿಕೆ

ಈ ಮಧ್ಯೆ, ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡದೆ ಕಾಂಗ್ರೆಸ್ ನಂಬಿಕೆ ದ್ರೋಹ ಮಾಡಿದ್ದು, ಇದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ತಾಲ್ಲೂಕಿನ ನಲ್ಲೂರು‌ ಮೋಳೆಯ ಚಂದ್ತಶೇಖರ್ ಎಂಬುವವರು ಬರೆದಿದ್ದಾರೆ ಎನ್ನಲಾದ ಪತ್ರವೊಂದು ವಾಟ್ಸ್ ಆ್ಯಪ್ ನಲ್ಲಿ ‌ಹರಿದಾಡುತ್ತಿದೆ.

ಹಿಂದಿನ ಲೇಖನಪಿಎಸ್‌’ಐ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ಲಕ್ಷಾಂತರ ಮೌಲ್ಯದ ವಸ್ತುಗಳು ಆಹುತಿ
ಮುಂದಿನ ಲೇಖನಹೈಕಮಾಂಡ್ ನಿರ್ಧಾರಕ್ಕೆ ಪಕ್ಷದಲ್ಲಿ ಎಲ್ಲರೂ ತಲೆ ಬಾಗಲೇ ಬೇಕು: ವೀರಪ್ಪ ಮೊಯ್ಲಿ