ಬೆಂಗಳೂರು : ನಗರದ ಅಭಿವೃದ್ಧಿಗೆ 2,296 ಕೋಟಿ ಅನುದಾನ ಮಂಜೂರು ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅನುದಾನ ಬಿಡುಗಡೆಗೆ ಕೈಗೊಳ್ಳಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿನ ವಾರ್ಡ್‌ಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ಒಟ್ಟು 2,296 ಕೋಟಿ ಮಂಜೂರಿಗೆ ಅನುಮೋದನೆ ನೀಡಿದೆ.
ಐದು ನಗರ ಪಾಲಿಕೆಗಳಲ್ಲಿನ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಡಾಂಬರಿಕರಣ ಕಾಮಗಾರಿಗಳನ್ನು ಕೈಗೊಳ್ಳಲು 1241.57 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಇದರೊಂದಿಗೆ 1055 ಕೋಟಿ ರೂ. ಹೆಚ್ಚುವರಿ ಅನುದಾನ ಸೇರಿ ಒಟ್ಟು 2,296 ಕೋಟಿ ಅನುದಾನ ಮಂಜೂರಿಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಈ ಸಂಪುಟ ಸಭೆಯಲ್ಲಿ ಕೆಜೆ ಜಾರ್ಜ್, ಹೆಚ್.ಸಿ ಮಹದೇವಪ್ಪ, ಎಂ.ಬಿ ಪಾಟೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.














