ಮನೆ ರಾಜಕೀಯ ಗುಜರಾತ್ ವಿಧಾನಸಭಾ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ

ಗುಜರಾತ್ ವಿಧಾನಸಭಾ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ

0

ಗದಗ : ಗುಜರಾತ್ ವಿಧಾನಸಭಾ ಚುನಾವಣೆಯ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದೆದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ತಲ್ಲೀನರಾಗಿದ್ದಾರೆ. ಈ ಚುನಾವಣೆ ಬಳಿಕ ವರಿಷ್ಠರ ಜೊತೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ

ಸತೀಶ್​ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಹಿಂದೂ ಪದವನ್ನು ಅಶ್ಲೀಲ ಎಂದು ಹೇಳುವವರ ಯೋಚನೆಯಲ್ಲೇ ಹೊಲಸಿದೆ. ಇದು ಮಾತಿನಲ್ಲಿ ಅಭಿವ್ಯಕ್ತವಾಗಿದೆ. ಹಿಂದೂ ಧರ್ಮ ಎಲ್ಲರ ನಂಬಿಕೆಯ ವಿಶ್ವಾಸದ ಧರ್ಮ. ಇಂತಹ ನಂಬಿಕೆಯ ವಿಶ್ವಾಸದ ಬುನಾದಿಯನ್ನು ಪ್ರಶ್ನೆ ಮಾಡಿದ್ದು, ಅತ್ಯಂತ ಖಂಡನೀಯ. ಅವರ ಮನಸ್ಸಿನಲ್ಲೇ ಹೊಲಸಿರುವುದರಿಂದ ಈ ರೀತಿಯಾಗಿದೆ ಎಂದು ಹೇಳಿದರು.