ಮೈಸೂರು(Mysuru): ಎರಡು ಮೂರು ದಿನದಲ್ಲಿ ಸಂಪುಟ ವಿಸ್ತರಣೆಯಾಗಲಿದೆ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯ ಸಚಿವ ಸಂಪುಟ ಪುನರಚನೆ ಅಥವಾ ವಿಸ್ತರಣೆ ಸಂಬಂಧ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿ ವರಿಷ್ಠರ ಜತೆ ಚರ್ಚಿಸಿ ಬೆಂಗಳೂರಿಗೆ ಹಿಂತಿರುಗಿದ್ದು, ಶೀಘ್ರವೇ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.
ಈ ನಡುವೆ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್ .ಯಡಿಯೂರಪ್ಪ, ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ ಎಂದು ಟೀಕಿಸಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ತಿರುಗೇಟು ನೀಡಿದ್ದಾರೆ.
ಯಾರು ದುರ್ಬಲರಿದ್ದರೂ ಯಾರು ಭ್ರಷ್ಟರಿದ್ದರೋ ಅಂತವರ ಬಾಯಲ್ಲಿ ಈ ರೀತಿ ಮಾತು ಬರುತ್ತೆ. ಸಿದ್ಧರಾಮಯ್ಯ ಕಾಲದಲ್ಲಿ ಏನಾಯ್ತು ಅಂತಾ ಗೊತ್ತಿದೆ ಎಂದು ಟಾಂಗ್ ನೀಡಿದರು.