ಬಳ್ಳಾರಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ವಿಕಲಚೇತನರಿಗಾಗಿ ನೀಡಲಾಗುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಎಸ್‌ಎಸ್‌ಪಿ (ಸ್ಟೇಟ್ ಸ್ಕಾಲರ್‌ಶಿಪ್ ಪೋರ್ಟಲ್)ನಲ್ಲಿ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿರುವ ಶಾಲಾ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದೃಢೀಕೃತ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಗೊಳಪಡುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ವಿ.ಆರ್.ಡಬ್ಲೂö್ಯ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಯು.ಆರ್.ಡಬ್ಲೂö್ಯ ಹಾಗೂ ತಾಲ್ಲೂಕ ಪಂಚಾಯತಿಯಲ್ಲಿರುವ ಎಮ್.ಆರ್.ಡಬ್ಲೂö್ಯಗಳಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆAಟ್‌ನ ಶಾಂತಿಧಾಮ ಆವರಣದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂ.08392 267886, ಎಂಆರ್‌ಡಬ್ಲೂö್ಯ: ಬಳ್ಳಾರಿ, ಕಂಪ್ಲಿ-8880875620, ಕುರುಗೋಡು-9538000887, ಸಿರುಗುಪ್ಪ-9743509698, ಸಂಡೂರು-9632052270 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














