ಮಂಗಳೂರು(Mangalore): ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಭೇಟಿ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಸಂಸದ ಸ್ಥಾನ ಬದಲಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಕಾರ್ಯಕರ್ತರು ಅಭಿಯಾನ ಆರಂಭಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ‘ಪೋಸ್ಟ್ ಕಾರ್ಡ್’ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಅಭಿಯಾನಕ್ಕೆ ಕೈ ಹಾಕಿದೆ.
ನಳಿನ್ ಕುಮಾರ್ ಕಟೀಲ್ ಬದಲು , ಸತ್ಯಜಿತ್ ಸುರತ್ಕಲ್ಗೆ ಸಂಸದ ಸ್ಥಾನ ಕೊಡಿ ಎಂದು ಪಟ್ಟು ಹಿಡಿಯಲಾಗಿದೆ.
ಹಿಂದುತ್ವದ ಜೊತೆಗೆ ಅಭಿವೃದ್ಧಿ ದೃಷ್ಟಿಕೋನ ಹೊಂದಿರುವ ನಾಯಕನ ಅಗತ್ಯವಿದೆ. ಮೋದಿ ಸ್ವಾಗತಿಸುವ ಮೊದಲು ಸಂಸದರ ಬದಲಾವಣೆಗೆ ಕೂಗು ಕೇಳಿ ಬರಲಿ ಅಂತಾ ಸಂದೇಶಗಳು ಹರಿದಾಡುತ್ತಿದ್ದು, ಇದಕ್ಕೆ ಪರ ಮತ್ತು ವಿರೋದ ಮೆಸೇಜ್ಗಳು ಜೋರಾಗಿವೆ.
ಈ ಪೋಸ್ಟ್ ಬಿಜೆಪಿ ವಲಯದಲ್ಲಿ ದೊಡ್ಡ ಸಂಚಲನವನ್ನು ಸೃಷ್ಠಿಸಿದ್ದು, ಮೋದಿ ಆಗಮನ ವೇಳೆ ಸಂಸದ ನಳಿನ್ ಕುಮಾರ್ ವಿರುದ್ಧ ಕಾರ್ಯಕರ್ತರು ಆಕ್ರೋಶಗೊಳ್ಳುವ ಸಾಧ್ಯತೆ ಇದೆ.
ಸೆಪ್ಟೆಂಬರ್ 2 ಶುಕ್ರವಾರದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ.