ಮನೆ ಕಾನೂನು ನಾವೇನು ದಾಳಿ ನಿಲ್ಲಿಸುವಂತೆ ರಷ್ಯಾಗೆ ನಿರ್ದೇಶನ ನೀಡಬಹುದೇ..? ಅರ್ಜಿದಾರರಿಗೆ ಸುಪ್ರೀಂ ಪ್ರಶ್ನೆ.

ನಾವೇನು ದಾಳಿ ನಿಲ್ಲಿಸುವಂತೆ ರಷ್ಯಾಗೆ ನಿರ್ದೇಶನ ನೀಡಬಹುದೇ..? ಅರ್ಜಿದಾರರಿಗೆ ಸುಪ್ರೀಂ ಪ್ರಶ್ನೆ.

0

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರೆಸಿದ್ದು ಈ ನಡುವೆ ಭಾರತೀಯರು ಸಿಲುಕಿದ್ದು ಅವರನ್ನ ವಾಪಸ್ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಈ ಸಂಬಂಧ ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಈ ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠ , ಸರ್ಕಾರ ಭಾರತೀಯರನ್ನು ಸ್ಥಳಾಂತರಿಸುವಂತ ಕಾರ್ಯಾಚರಣೆ ನಡೆಸುತ್ತಿದೆ. ಕೋರ್ಟ್ ಏನು ಮಾಡಬೇಕು.? ನಾವೇನು ರಷ್ಯಾ ದಾಳಿಯನ್ನು ನಿಲ್ಲಿಸುವಂತೆ ರಷ್ಯಾ ಅಧ್ಯಕ್ಷ ಪುಟೀನ್ ಅವರಿಗೆ ನಿರ್ದೇಶನ ನೀಡಬೇಕೇ ಎಂದು ಅರ್ಜಿದಾರರಿಗೆ ಪ್ರಶ್ನಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ಸರ್ಕಾರ ಏನು ಮಾಡುತ್ತಿದ್ದಾರೆ ಎಂದು ಹೇಳುವ ಕೆಲವು ವೀಡಿಯೊಗಳನ್ನು ನಾನು ನೋಡಿದೆ. ನಾವು ಅವರ ಬಗ್ಗೆ ಸಹಾನುಭೂತಿ ಹೊಂದಿದ್ದೇವೆ ಎಂದು ಸುಪ್ರೀಂಕೋರ್ಟ್ ಪೀಠ ತಿಳಿಸಿದೆ.

ಈ ವೇಳೆ ಅರ್ಜಿದಾರರ ಪರ ವಕೀಲರು ಉಕ್ರೇನ್ ನಲ್ಲಿರುವ ಭಾರತೀಯರಲ್ಲಿ, ಅವರ ಪೋಷಕರಲ್ಲಿ ಆತಂಕ ಮನೆ ಮಾಡಿದೆ ಎಂದು ತಿಳಿಸಿದರು. ಇದಕ್ಕೆ ಉತ್ತರಿಸಿದ ನ್ಯಾಯಪೀಠ, ಸರ್ಕಾರ ಈಗಾಗಲೇ ಸ್ಥಳಾಂತರ ಕಾರ್ಯಾಚರಣೆ ಮಾಡುತ್ತಿದೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನು ನಾವು ಎಜೆಯನ್ನು ಕೇಳುತ್ತೇವೆ ಎಂದಿದ್ದು. ನಂತರ ಸುಪ್ರೀಂ ಕೋರ್ಟ್ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ ಅವರನ್ನು ಸರ್ಕಾರೊಂದಿಗೆ ಮಾತನಾಡಿ, ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡುವಂತೆ ಸೂಚಿಸಿತು. ನಿಮಗೆ ಸಾಧ್ಯವಾದಷ್ಟು ಸಹಾಯ ಮಾಡಿ ಎಂದು  ಅಟಾರ್ನಿ ಜನರಲ್ ಗೆ ಸಿಜೆಐ  ತಿಳಿಸಿದರು.

ಹಿಂದಿನ ಲೇಖನಮಕ್ಕಳ ಪಾಲನಾ ಸಂಸ್ಥೆಯಲ್ಲಿ ಅಪ್ರಾಪ್ತ ವಯಸ್ಕರನ್ನು ಬಲವಂತವಾಗಿ ಮತಾಂತರಿಸಲಾಗಿದೆ ಎಂದು ಆರೋಪಿಸಲಾಗಿದ್ದು, ತಾಯಿ ಜೆಜೆ ಕಾಯಿದೆಯ ನಿಬಂಧನೆಗಳನ್ನು ಪ್ರಶ್ನಿಸಿ ₹5 ಕೋಟಿ ಪರಿಹಾರವನ್ನು ಕೋರಿದ್ದಾರೆ.
ಮುಂದಿನ ಲೇಖನಪತಿ ಆತ್ಮಹತ್ಯೆ ಮಾಡಿಕೊಂಡು ಮೂರು ದಿನ ಕಳೆದರು ಮಾಹಿತಿ ನೀಡದ ಪತ್ನಿ