ಮನೆ ಕಾನೂನು ಮುಸ್ಲಿಮರಿಗೆ ಮೀಸಲಾತಿ ರದ್ದು: ಸುಪ್ರೀಂನಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೇಳಿದ ಕರ್ನಾಟಕ ಸರ್ಕಾರ

ಮುಸ್ಲಿಮರಿಗೆ ಮೀಸಲಾತಿ ರದ್ದು: ಸುಪ್ರೀಂನಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೇಳಿದ ಕರ್ನಾಟಕ ಸರ್ಕಾರ

0

ನವದೆಹಲಿ: ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಒಬಿಸಿ ಕೋಟಾ ಮೀಸಲಾತಿಯನ್ನು ರದ್ದುಗೊಳಿಸಿರುವ ಪ್ರಕರಣ ಸಂಬಂಧ ಪ್ರತಿಕ್ರಿಯಿಸಲು ಕರ್ನಾಟಕ ಸರ್ಕಾರವು ಸಮಯಾವಕಾಶ ಕೇಳಿದೆ.

Join Our Whatsapp Group

ಹೀಗಾಗಿ ಸುಪ್ರೀಂ ಕೋರ್ಟ್‌ ವಿಚಾರಣೆಯನ್ನು ಏಪ್ರಿಲ್‌ 25ಕ್ಕೆ ಮುಂದೂಡಿದೆ.

ಮೀಸಲಾತಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ವಿಚಾರಣೆಯನ್ನು ಏಪ್ರಿಲ್‌ 13ರಂದು ನಡೆಸಿದ್ದ ಸುಪ್ರೀಂ ಕೋರ್ಟ್, ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ದೋಷ ಪೂರಿತ, ಅಸ್ಥಿರ ಹಾಗೂ ಪ್ರಮಾದದಿಂದ ಕೂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಹೇಳಿತ್ತು.‌

ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್‌ ಹಾಗೂ ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠ, ಪ್ರಕರಣ ಸಂಬಂಧ ಸೋಮವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿ, ವಿಚಾರಣೆಯನ್ನು ಏಪ್ರಿಲ್‌ 18ಕ್ಕೆ ಮುಂದೂಡಿತ್ತು.

ಹಿಂದಿನ ಲೇಖನಟಿಕೆಟ್ ಕೈ ತಪ್ಪಲು ಬಿ.ಎಲ್ ಸಂತೋಷ್ ಕಾರಣ: ಜಗದೀಶ್ ಶೆಟ್ಟರ್
ಮುಂದಿನ ಲೇಖನಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವು