ಚಿಕ್ಕಬಳ್ಳಾಪುರ(Chikkaballapura): ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಿಂತಿದ್ದ ಬೈಕ್ ಮತ್ತು ಕಾರುಗಳಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಹೋಟೆಲ್ ಭದ್ರತಾ ಸಿಬ್ಬಂದಿ ನಾರಾಯಣಸ್ವಾಮಿ ಹಾಗೂ ಬೈಕ್ ಸವಾರ ಜನಾರ್ಧನ ಮೃತರು.
ಈ ಸರಣಿ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಗಾಯಗೊಂಡ ನಾಲ್ವರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಡ್ಡಬಂದ ಕಾರನ್ನು ತಪ್ಪಿಸಲು ಹೋಗಿ ಕ್ಯಾಂಟರ್ ಚಾಲಕ ನಿಯಂತ್ರಣ ಕಳೆದುಕೊಂಡು ಮುಂದೆ ನಿಂತಿದ್ದ ಬೈಕ್, ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗ್ತಿದೆ.
ಘಟನೆಯಿಂದ ಗರ್ಭಿಣಿಯೊಬ್ಬರು ಗಂಭೀರ ಗಾಯಗೊಂಡಿದ್ದು, ಗರ್ಭಾವಸ್ಥೆಯಲ್ಲಿದ್ದ ಮಗು ಮೃತಪಟ್ಟಿದೆ. ಮತ್ತೊಂದು ಮಗು ಪ್ರಾಣಾಪಾಯದಿಂದ ಪಾರಾಗಿದೆ.
ಈ ಕುರಿತು ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ಯಾಂಟರ್ ಚಾಲಕ ಅಜೀತ್ನನ್ನು ಬಂಧಿಸಿ ವಾಹನ ವಶಪಡಿಸಿಕೊಳ್ಳಲಾಗಿದೆ. ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.