ಮನೆ ರಾಜ್ಯ ಕಾರು ಅಪಘಾತ: ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರಗೆ ಗಾಯ

ಕಾರು ಅಪಘಾತ: ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರಗೆ ಗಾಯ

0

ಕಲಬುರಗಿ: ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ.

Join Our Whatsapp Group

ಕಾರಿನಲ್ಲಿದ್ದ ಚಿಂಚನಸೂರ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿದರು.

ತಡರಾತ್ರಿ ಎರಡು ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಎಲುಬು ಹಾಗೂ ನರಗಳಿಗೆ ಏಟು ಬಿದ್ದಿದೆ. ಆಸ್ಪತ್ರೆಯ ತಜ್ಞ ವೈದ್ಯರು ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಾಬುರಾವ ಅವರ ಮನೆ ಕಲಬುರಗಿಯ ಶಾಂತಿನಗರದಲ್ಲಿದೆ. ಕ್ಷೇತ್ರದಲ್ಲಿ ಪ್ರಚಾರ ಮುಗಿಸಿಕೊಂಡು ವಾಪಸ್ ಬರುವಾಗ ಘಟನೆ ನಡೆದಿದೆ ಎಂದು ಗೊತ್ತಾಗಿದೆ.

ಕಾರ್ ​ನಲ್ಲಿ ಇಬ್ಬರು ಚಾಲಕರು, ಓರ್ವ ಗನ್ ಮ್ಯಾನ್ ಸೇರಿದಂತೆ ನಾಲ್ಕು ಜನರು ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಹಿಂದಿನ ಲೇಖನಸಂಶೋಧನಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ ಭಾರತೀಯ ಕಾನೂನು ಆಯೋಗ
ಮುಂದಿನ ಲೇಖನಮಹಾರಾಷ್ಟ್ರ: ಕಂದಕಕ್ಕೆ ಬಸ್ ಉರುಳಿ 8 ಮಂದಿ ಸಾವು