ಮನೆ ಅಪರಾಧ ಬೆಂಗೂರಿನಲ್ಲಿ ಭೀಕರ ಅಪಘಾತ; ಕಾರು ಸಂಪೂರ್ಣ ಜಖಂ

ಬೆಂಗೂರಿನಲ್ಲಿ ಭೀಕರ ಅಪಘಾತ; ಕಾರು ಸಂಪೂರ್ಣ ಜಖಂ

0

ಬೆಂಗಳೂರು: ಇನೋವಾ ಕ್ರಿಸ್ಟಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿರುವ ಘಟನೆ ಬುಧವಾರ ರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಂತ್ರಿ ಮಾಲ್ ಬಳಿ ನಡೆದಿದೆ.

ಇನೋವಾ ಕ್ರಿಸ್ಟಾ ಕಾರಿನಲ್ಲಿ ಓವರ್ ಸ್ಪೀಡ್ ಆಗಿ ಬಂದ ಚಾಲಕ ರಸ್ತೆ ಡಿವೈಡರ್‍ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಎರಡು ಏರ್ ಬ್ಯಾಗ್‌ಗಳು ಓಪನ್ ಆಗಿದೆ. ಅಲ್ಲದೇ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸೇರಿ ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದೀಗ ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ವೇಳೆ ಕಾರಿನಲ್ಲಿ ಮದ್ಯ ಬಾಟಲಿ ಪತ್ತೆಯಾಗಿದ್ದು, ಮದ್ಯ ಸೇವಿಸಿ ಕಾರು ಚಾಲನೆ ಮಾಡಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಸದ್ಯ ಇಬ್ಬರನ್ನೂ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಮೆಡಿಕಲ್ ಟೆಸ್ಟ್ ಮಾಡಿಸುತ್ತಿದ್ದಾರೆ. ಈ ವೇಳೆ ಮದ್ಯ ಸೇವನೆ ಮಾಡಿರುವುದು ಕಂಡು ಬಂದರೆ ಡ್ರಿಂಕ್ ಆ್ಯಂಡ್ ಡ್ರೈವ್ ಕೇಸ್ ಅಡಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿನ ಲೇಖನಕಾಂಗ್ರೆಸ್ ತೊರೆಯಲು ಸಿದ್ದರಾದ ಹಿರಿಯ ಮುಖಂಡ ಸಿಎಂ ಇಬ್ರಾಹಿಂ
ಮುಂದಿನ ಲೇಖನಮದ್ಯ ಸೇವಿಸಿ ವಾಹನ ಚಾಲನೆ ಅಪರಾಧ: ಸುಪ್ರೀಂ ಕೋರ್ಟ್ ತೀರ್ಪು