ಮದ್ದೂರ: ಕೆಎಸ್‌ಆರ್‌ಟಿಸಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ,ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಛಿದ್ರ ಛಿದ್ರಗೊಂಡಿದೆ.
ಅಪಘಾತದಲ್ಲಿ ಮಳವಳ್ಳಿ ಟೌನ್ ಅಕ್ಷಯ್ 24 ವರ್ಷ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿ ಐವರು ಪ್ರಯಾಣ ಮಾಡುತ್ತಿದ್ದರು.ಮಳವಳ್ಳಿ ಟೌನ್ ನಿಂದ ಈ ಐದು ಸ್ನೇಹಿತರು ಚನ್ನಪಟ್ಟಣ ತಾಲ್ಲೂಕಿನ ಗೌಡಗೆರೆ ಚಾಮುಂಡಿ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು ವಾಪಸ್ ಮದ್ದೂರುನಿಂದ ಮಳವಳ್ಳಿ ಕಡೆ ಹೋಗುವಾಗ ಈ ಅಪಘಾತದಲ್ಲಿ ಸ್ಥಳದಲ್ಲೇ ಕಾರು ಚಾಲಕ ಮೃತಪಟ್ಟರೆ, ನಾಲ್ವರು ಗಾಯಗೊಂಡಿದ್ದಾರೆ. ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿದ್ದು,ಈತನ ಜೊತೆಯಲ್ಲಿದ್ದ ಸ್ನೇಹಿತರಾದ ಮಧು 25 ವರ್ಷ, ಬಸವರಾಜು 26 ವರ್ಷ, ತೀವ್ರವಾಗಿ ಗಾಯಗೊಂಡಿದ್ದಾರೆ. ಮನು 25 ವರ್ಷ ಹಾಗೂ ಮಾದೇಗೌಡ 27 ವರ್ಷ ಇಬ್ಬರು ಗಾಯಗೊಂಡಿದ್ದಾರೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಮಂಡ್ಯ ವಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಮದ್ದೂರು ಸಮೀಪದ ರಸ್ತೆಯ ಬೋರಾಪುರ ಸಮಿತಿ ಸಾದೋಳಲು ಗೇಟ್ ಬಳಿ ಈ ಅಪಘಾತ ನಡೆದಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಛಿದ್ರಗೊಂಡಿದೆ. ಬಸ್‌ನ ಮುಂಭಾಗ ಜಖಂಗೊಂಡಿದೆ. ಇನ್ನೂ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಚಾಲಕ, ನಿರ್ವಾಹಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಾರಾಗಿದ್ದಾರೆ. ಈ ಅಪಘಾತದಿಂದಾಗಿ ಬೋರಾಪುರ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಮದ್ದೂರು ಪಟ್ಟಣ ಠಾಣೆ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು. ಛಿದ್ರಗೊಂಡಿದ್ದ ಕಾರನ್ನು ತೆರವು ಮಾಡಿದ್ದರು. ಮದ್ದೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.