ಮನೆ ರಾಜ್ಯ ದಾಂಡೇಲಿಯಲ್ಲಿ ಹೊತ್ತಿ ಉರಿದ ಕಾರು: ಚಾಲಕ ಪಾರು

ದಾಂಡೇಲಿಯಲ್ಲಿ ಹೊತ್ತಿ ಉರಿದ ಕಾರು: ಚಾಲಕ ಪಾರು

0

ದಾಂಡೇಲಿ: ದಾಂಡೇಲಿ-ಅಂಬಿಕಾನಗರ ರಸ್ತೆ ಸಮೀಪ ಬಡಕಾನಶಿರಡಾದಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ಫೆ. 28ರ ಬುಧವಾರ ಬೆಳಗ್ಗೆ ನಡೆದಿದೆ.

ದಾಂಡೇಲಿಯಿಂದ ಅಂಬಿಕಾನಗರದ ಕಡೆಗೆ ಹೋಗುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಚಾಲಕ ವಾಹನ ನಿಲ್ಲಿಸಿ ಕೆಳಗಿಳಿದಿದ್ದಾನೆ. ಆದರೆ ಕಾರು ಸಂಪೂರ್ಣ ಸುಟ್ಟು ಹೋಗಿದೆ.

ಘಟನೆ ನಡೆದ ತಕ್ಷಣ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಅಗ್ನಿಶಾಮಕ ದಳದ ವಾಹನ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದೆ.

ಘಟನಾ ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹಿಂದಿನ ಲೇಖನನಟ ಕೆ ಶಿವರಾಮ್ ಅವರಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ಮುಂದಿನ ಲೇಖನಶರಣರನ್ನು ಹೊರಗಿಟ್ಟು 3 ದಿನದಲ್ಲಿ ಮಠ, ಎಸ್‌ ಜೆಎಂ ವಿದ್ಯಾಪೀಠ ನಿರ್ವಹಣೆಗೆ ಸಮಿತಿ ರಚಿಸಲು ಸರ್ಕಾರಕ್ಕೆ ಸುಪ್ರೀಂ ಆದೇಶ