ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ–ಅಹಮದಾಬಾದ್ ಹೆದ್ದಾರಿಯಲ್ಲಿ ಬಸ್ಸಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಹೆದ್ದಾರಿಯ ಮಹಾಲಕ್ಷ್ಮೀ ಸೇತುವೆ ಬಳಿ ಬೆಳಗಿನ ಜಾವ 3.30ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಕಾಸ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಗುಜರಾತ್’ನಿಂದ ಮುಂಬೈಗೆ ತೆರಳುತ್ತಿತ್ತು. ಹಿಂಬದಿಯಿಂದ ಬಸ್ಸಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಸಂದರ್ಭ ಮಹಿಳೆ ಸೇರಿ ಕಾರಿನಲ್ಲಿದ್ದ ನಾಲ್ಕೂ ಮಂದಿ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.