ಮನೆ ಅಪರಾಧ ಡಿವೈಡರ್’ಗೆ ಡಿಕ್ಕಿಯಾಗಿ ಉರುಳಿ ಬಿದ್ದ ಕಾರು: ಮಗು ಸೇರಿದಂತೆ 9 ಜನರಿಗೆ ಗಾಯ

ಡಿವೈಡರ್’ಗೆ ಡಿಕ್ಕಿಯಾಗಿ ಉರುಳಿ ಬಿದ್ದ ಕಾರು: ಮಗು ಸೇರಿದಂತೆ 9 ಜನರಿಗೆ ಗಾಯ

0

ದಾವಣಗೆರೆ(Davanagere): ಎದುರಿಗೆ ಬಂದ ಬೈಕ್’ಗೆ ದಾರಿ ಬಿಡಲು ಹೋಗಿ ಡಿವೈಡರ್’ಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕಕ್ಕೆ ಕಾರು ಉರುಳಿ ಬಿದ್ದ ಪರಿಣಾಮ 9 ಜನರು ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ದೊಡ್ಡಬಾತಿ ಬಳಿ ಸಂಭವಿಸಿದೆ.

ಒಂದು ಮಗು, ಚಾಲಕ ಹಾಗೂ ಏಳು ಮಹಿಳೆಯರು ಗಾಯಗೊಂಡಿದ್ದಾರೆ. ಇಬ್ಬರು ಮಹಿಳೆಯರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ದಾವಣಗೆರೆ ‌ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಗಾಯಾಳುಗಳೆಲ್ಲಾ ಕೊಲ್ಹಾರ ನಗರದ ಕಿಲ್ಲಾರಪೇಟೆಯ ಕಾರಂಜಿ ಕಟ್ಟಿ ನಿವಾಸಿಗಳು ಎಂದು ತಿಳಿದು ಬಂದಿದೆ.

ಕೊಲ್ಹಾರದಿಂದ ಶಿವಮೊಗ್ಗ ಜಿಲ್ಲೆಯ ಸಿಗಂದೂರ ಚೌಡೇಶ್ವರಿ ದರ್ಶನಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಹಿಂದಿನ ಲೇಖನವಿಧಾನಸಭೆಯಲ್ಲಿ ಸಾವರ್ಕರ್ ಫೋಟೊ: ಸ್ಪೀಕರ್ ನಿರ್ಧಾರ ಎಂದ ಸಿಎಂ ಬೊಮ್ಮಾಯಿ
ಮುಂದಿನ ಲೇಖನಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ