ಚಿಕ್ಕಮಗಳೂರು: ರಸ್ತೆಯ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೂಡ್ಲೂರು ಗೇಟ್ ಬಳಿ ನಡೆದಿದೆ.
ತುಮಕೂರು ಜಿಲ್ಲೆ ಗುಬ್ಬಿ ಮೂಲದ 2 ವರ್ಷದ ಮಗು ವಿಕ್ರಾಂತ್ ಮತ್ತು ಕಾರು ಚಾಲಕ ಪೃಥ್ವಿ(36) ಮೃತ ಪಟ್ಟಿದ್ದಾರೆ.
ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗುಬ್ಬಿಯಿಂದ ಮುರುಡೇಶ್ವರ ದೇಗುಲಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ರೂ ಹೆದ್ದಾರಿ ಪ್ರಾಧಿಕಾರ ಫಲಕ ಅಳವಡಿಸಿರಲಿಲ್ಲ. ರಸ್ತೆ ಕಾಮಗಾರಿ ಹಿನ್ನೆಲೆ ಮುಖ್ಯ ರಸ್ತೆ ಬಂದ್ ಮಾಡಲಾಗಿತ್ತು. ಬೈಪಾಸ್ ತಿರುವಿನಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.