ಅಹಮದಾಬಾದ್: ಗುಜರಾತ್ ನ ಸಬರ್ ಕಾಂತ ಜಿಲ್ಲೆಯ ಹಿಮತ್ ನಗರ ಬಳಿ ಇಂದು ಬೆಳಿಗ್ಗೆ ಟ್ರಕ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ ‘ಪಿಟಿಐ’ ವರದಿ ಮಾಡಿದೆ.
ಶ್ಯಾಮಲಾಜಿಯಿಂದ ಅಹಮದಾಬಾದ್‌ಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದೆ ಹೋಗುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಹಿಮತ್‌ನಗರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಪಟೇಲ್ ಮಾಹಿತಿ ನೀಡಿದ್ದಾರೆ.
Saval TV on YouTube