ಪುಂಜಾಲಕಟ್ಟೆ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಮೃತಪಟ್ಟಿದ್ದು ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಸ್ಕೂಟಿ ಸವಾರ, ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ (35) ಮೃತಪಟ್ಟವರಾಗಿದ್ದು, ಅವರ ನೆರೆಮನೆಯ ಆಕಾಶ್ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು, ಬಿ.ಸಿ.ರೋಡಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಅತೀವೇಗದಲ್ಲಿ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ರಿಟ್ಜ್ ಕಾರು ಢಿಕ್ಕಿ ಹೊಡೆದಿದೆ.
ಅಪಘಾತದಿಂದ ಗಾಯಗೊಂಡಿದ್ದ ಸಂದೀಪ್ ಲೋಬೋ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅಸುನೀಗಿದ್ದು, ಆಕಾಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುಂಜಾಲಕಟ್ಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.