ಗುಂಡ್ಲುಪೇಟೆ(ಚಾಮರಾಜನಗರ): ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಕೊಡಸೋಗೆ ಗ್ರಾಮದ ಕುಂಬಾರಗುಂಡಿ ಬಳಿ ಜ.1ರ ಬುಧವಾರ ನಡೆದಿದೆ.
ಬೊಮ್ಮಲಾಪುರ ಸೆಸ್ಕ್ ಕಚೇರಿಯಲ್ಲಿ ಅಸಿಸ್ಟೆಂಟ್ ಪವರ್ ಮ್ಯಾನ್ ಆಗಿದ್ದ ಪ್ರತಾಪ್ ಕುಮಾರ್ (28), ಕೊಡಸೋಗೆ ಗ್ರಾಮದ ಕೊಂಗಳ್ಳಯ್ಯ(45) ಸ್ಥಳದಲ್ಲೇ ಮೃತಪಟ್ಟಿದ್ದು, ಮಂಡ್ಯ ಮೂಲದ ಅಭಿ ಎಂಬವರಿಗೆ ಗಂಭೀರ ಗಾಯಗಳಾಗಿವೆ.
ಘಟನೆಯ ವಿವರ: ಕಂದೇಗಾಲದಿಂದ ಕೊಡಸೋಗೆಗೆ ಹೋಗುವ ರಸ್ತೆಯ ಕುಂಬಾರ ಗುಂಡಿ ಬಳಿ ಬುಧವಾರ ಬೆಳಗಿನ ಜಾವ ಬಲೇನೊ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ್ದರಿಂದ ಕಂಬ ಮುರಿದು ಕಾರಿನ ಮೇಲೆ ಬಿದ್ದು ಕಾರು ಪೂರ್ತಿ ಜಖಂಗೊಂಡಿದ್ದು, ಕಾರಿನೊಳಗಡೆ ಇದ್ದ ಮೂರು ಜನರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯವಾಗಿದೆ.
ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಚಾಮರಾಜನಗರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಚಾಮರಾಜನಗರದ ಸಿಮ್ಸ್ ರವಾನಿಸಲಾಗಿದೆ.
ಪ್ರಕರಣ ಸಂಬಂಧ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.