ಕೇರಳ: ಕಾರು ಪೆರಿಯಾರ್ ನದಿಗೆ ಉರುಳಿ ಇಬ್ಬರು ವೈದ್ಯರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಕೊಚ್ಚಿಯಲ್ಲಿ ನಡೆದಿದೆ.
ಅದ್ವೈತ್ (29) ಮತ್ತು ಅಜ್ಮಲ್ (29) ಮೃತ ವೈದ್ಯರಾಗಿದ್ದಾರೆ.
ಖಾಸಗಿ ಆಸ್ಪತ್ರೆಯ ವೈದ್ಯ ಡಾ.ಅದ್ವೈತ್ ಕಾರು ಚಾಲನೆ ಮಾಡುತ್ತಿದ್ದರು ಎನ್ನಲಾಗಿದೆ.
ಗೋತುರುತ್ ನಲ್ಲಿ ಭಾರೀ ಮಳೆಯಾಗಿದ್ದು, ಗೋಚರತೆ ಕೂಡ ತುಂಬಾ ಕಡಿಮೆ ಇತ್ತು. ಕಾರು ಚಲಾಯಿಸುತ್ತಿದ್ದ ಯುವಕ ಗೂಗಲ್ ಮ್ಯಾಪ್ ತೋರಿಸಿದ ಮಾರ್ಗದಲ್ಲಿ ಹೋಗುತ್ತಿದ್ದ. ಎಡ ತಿರುವಿನಲ್ಲಿ ಕಾರನ್ನು ತಿರುಗಿಸಬೇಕಾಗಿದ್ದರೂ ಆಕಸ್ಮಿಕವಾಗಿ ಮುಂದೆ ಹೋಗಿದ್ದರಿಂದ ಕಾರು ನದಿಗೆ ಬಿದ್ದಿದೆ. ಅಲ್ಲಿದ್ದ ವ್ಯಕ್ತಿಯೊಬ್ಬರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಪೊಲೀಸರು ಅಪಘಾತದ ತನಿಖೆಯನ್ನು ನಡೆಸುತ್ತಿದ್ದಾರೆ.