ಮನೆ ಅಪರಾಧ ಎಲೆಕ್ಟ್ರಿಕಲ್ ಸ್ಕೂಟರ್‌ ಗೆ ಕಾರು ಡಿಕ್ಕಿ: ವ್ಯಕ್ತಿ ಸಾವು

ಎಲೆಕ್ಟ್ರಿಕಲ್ ಸ್ಕೂಟರ್‌ ಗೆ ಕಾರು ಡಿಕ್ಕಿ: ವ್ಯಕ್ತಿ ಸಾವು

0

ಭಾರತೀನಗರ:- ಇಲ್ಲಿಗೆ ಸಮೀಪದ ಹಾಗಲಹಳ್ಳಿ ಗೇಟ್ ಬಳಿ ಕಾರೊಂದು ಎಲೆಕ್ಟ್ರಿಕಲ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ.

Join Our Whatsapp Group


ಚನ್ನಪಟ್ಟಣ ತಾಲ್ಲೂಕಿನ ಸೋಗಾಲೆಪಾಳ್ಯ ಗ್ರಾಮದ ೬೩ ವರ್ಷದ ಟಿ.ಪುಟ್ಟಸ್ವಾಮೀಗೌಡ ಎಂಬುವರೇ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ ವ್ಯಕ್ತಿಯಾಗಿದ್ದಾರೆ.
ತೊರೆಬೊಮ್ಮನಹಳ್ಳಿ ಗ್ರಾಮದ ಮಹತೇಂಶ್ ಉ|| ಕೌಶಿಕ್ ಎಂಬುವವರು ತಮ್ಮ ಕಾರಿನಲ್ಲಿ ಹಲಗೂರು ಕಡೆಯಿಂದ ತಮ್ಮ ಗ್ರಾಮಕ್ಕೆ ಬರುತ್ತಿದ್ದಾಗ ಕಾರು ಡಿಕ್ಕಿಹೊಡೆದಿದೆ. ಡಿಕ್ಕಿಹೊಡೆದ ರಭಸಕ್ಕೆ ಟಿ.ಪುಟ್ಟಸ್ವಾಮೀಗೌಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ತಕ್ಷಣ ಅಕ್ಕಪಕ್ಕದವರು ಪೊಲೀಸರಿಗೆ ದೂರು ಮುಟ್ಟಿಸಿದ್ದಾರೆ. ದೂರಿನ ಮೇರೆಗೆ ಕೆ.ಎಂ.ದೊಡ್ಡಿ ಪೊಲೀಸರು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿ ಶವವನ್ನು ಕೆ.ಎಂ.ದೊಡ್ಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಿ ನಂತರ ಪಂಚನಾಮೆ ನಡೆಸಿ ಬುಧವಾರ ಸಂಜೆ ೩.೩೦ ರಲ್ಲಿ ವಾರಸುದಾರರಿಗೆ ಒಪ್ಪಿಸಿದ್ದಾರೆ.


ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.