ತೆಲಂಗಾಣ: ಮೇದಕ್ ಜಿಲ್ಲೆಯಲ್ಲಿ ಕಾರೊಂದು ಪಲ್ಟಿಯಾಗಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ.
ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬ ತೂಪ್ರಾಣದಿಂದ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದಿದೆ. ಅಪಘಾತದಲ್ಲಿ ಮಕ್ಕಳು ಸೇರಿದಂತೆ ಕುಟುಂಬದವರೆಲ್ಲರೂ ಸಾವನ್ನಪ್ಪಿದ್ದಾರೆ.
ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಿಸಿದ್ದಾರೆ, ಆದರೆ ದುರದೃಷ್ಟವಶಾತ್, ಕುಟುಂಬದ ಎಲ್ಲಾ ಸದಸ್ಯರು ಗಂಭೀರ ಗಾಯಗಳಿಂದ ಈಗಾಗಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಶಿವಂಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.














