ಮನೆ ಸುದ್ದಿ ಜಾಲ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ – ಓರ್ವ ಸಾವು

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ – ಓರ್ವ ಸಾವು

0

ಕೋಲಾರ : ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಚೆನ್ನೈ ಮೂಲದ ದೇವಾನಂದ್ (24) ಮೃತಪಟ್ಟಿದ್ದಾನೆ. ಮತ್ತೋರ್ವ ಯುವಕ ಸರ್ವೇಶ್ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಇಂದು ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಕ್ರೇಟಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ ನಾಲ್ಕೈದು ಪಲ್ಟಿಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಬೇತಮಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.‌