ನೋಯ್ಡಾ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಶುಕ್ರವಾರ ರಾತ್ರಿ ನೋಯ್ಡಾದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ದೆಹಲಿಗೆ ತೆರಳುತ್ತಿದ್ದಾಗ ಅವರ ಬೆಂಗಾವಲು ವಾಹನಕ್ಕೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಉತ್ತರ ಪ್ರದೇಶ ಪೊಲೀಸರು ಬೆಂಗಾವಲು ಪಡೆಗೆ ನುಗ್ಗಿದ ಇಬ್ಬರನ್ನು ಬಂಧಿಸಿದ್ದಾರೆ ಮತ್ತು ಎಫ್ ಐಆರ್ ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ಇಬ್ಬರೂ ನಿದ್ರಾಹೀನ ಸ್ಥಿತಿಯಲ್ಲಿದ್ದರು.
ವೇಗವಾಗಿ ಬಂದ ವಾಹನ ರಾಜ್ಯಪಾಲರ ಬೆಂಗಾವಲು ವಾಹನಕ್ಕೆ ಎರಡು ಬಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಭಾಗಿಯಾಗಿದೆ ಎನ್ನಲಾದ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ನೋಯ್ಡಾದ ಸೆಕ್ಟರ್ 77ನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದರು.














