ಮನೆ ಕಾನೂನು ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣ ಸಿಬಿಗೆ ವರ್ಗ

ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣ ಸಿಬಿಗೆ ವರ್ಗ

0

ಬೆಂಗಳೂರು: ನಗರದ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಹುಸಿ ಬಾಂಬ್ ಬೆದರಿಕೆ​​ ಮಾಡಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.

ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು.

ಮ್ಯೂಸಿಯಂ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಂದು ಪೊಲೀಸರು ಪರಿಶೀಲನೆ ನಡೆಸಿದ್ದರು. ಬಾಂಬ್​ ನಿಷ್ಕ್ರಿಯ ದಳ, ಶ್ವಾನ ದಳದಿಂದಲೂ ಪರಿಶೀಲನೆ ನಡೆಸಲಾಗಿತ್ತು. ಪರಿಶೀಲನೆ ಬಳಿಕ ಹುಸಿ ಬಾಂಬ್​ ಬೆದರಿಕೆ ಸಂದೇಶ ಎಂಬುದು ಪತ್ತೆಯಾಗಿತ್ತು.  ಕಬ್ಬನ್​ ಪಾರ್ಕ್​ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹಿಂದಿನ ಲೇಖನಯುವಜನರ ಜೀವನಕ್ಕೆ ಧೈರ್ಯವನ್ನು ತುಂಬಲು ಯುವನಿಧಿ ಯೋಜನೆ ಜಾರಿ: ಡಾ. ಕೆ.ವಿ ರಾಜೇಂದ್ರ
ಮುಂದಿನ ಲೇಖನಹುಟ್ಟು ಹಬ್ಬ ಸಂಭ್ರಮಾಚರಣೆ ಬಳಿಕ ಜಾಲಿ ರೈಡ್ ಹೋಗುತ್ತಿದ್ದಾಗ ಅಪಘಾತ: ಇಬ್ಬರ ಸಾವು