ಮನೆ ಕಾನೂನು ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ವಸತಿ ಶಾಲೆಯ ಪ್ರಾಂಶುಪಾಲರ ಅಮಾನತು

ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ವಸತಿ ಶಾಲೆಯ ಪ್ರಾಂಶುಪಾಲರ ಅಮಾನತು

0

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಯಲ್ಲಿ ಕಲುಷಿತ ಆಹಾರ ಸೇವಿಸಿ ಒಟ್ಟು 24 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿಂದಂತೆ ಶಾಲೆಯ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ.

Join Our Whatsapp Group

ಶಾಲೆಯ ಪ್ರಾಂಶುಪಾಲ ಕುಮಾರಸ್ವಾಮಿ ಅವರನ್ನು ಅಮಾನತು ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಿಇಒ ಡಾ.ನವೀನ್‌ ಕುಮಾರ್ ಆದೇಶ ಹೊರಡಿಸಿದ್ದಾರೆ.

ಏನಿದು ಘಟನೆ ?

ಇನ್ನು ವಸತಿ ನಿಲಯದ ಶುಚಿತ್ವ, ಆಹಾರ ಸಾಮಾಗ್ರಿಗಳ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಎಸಗಿರುವ ಆರೋಪ ಕೇಳಿಬಂದಿತ್ತು. ವಿದ್ಯಾರ್ಥಿಗಳಿಗೆ ಸಮರ್ಪಕ ಊಟ ವಸತಿ ನೀಡದೇ, ಜೊತೆಗೆ ವಸತಿ ನಿಲಯ ಪಾಲಕರ ಪ್ರಭಾರವನ್ನು ಬೇರೆ ಶಿಕ್ಷಕರಿಗೆ ವಹಿಸದೆ ಪ್ರಾಂಶುಪಾಲ ತಾವೇ ನಿರ್ವಹಿಸುತ್ತಿದ್ದರು. ಅದರಂತೆ ಭಾನುವಾರ ರಾತ್ರಿ ಊಟ ಸೇವಿಸಲು ಬಂದ ಮಕ್ಕಳು, ಇವತ್ತು ಊಟದಲ್ಲಿ ಉಪ್ಪು, ಕಾರ ಕಡಿಮೆ ಇದೆಯೆಂದು ಹೇಳಿ ಹಾಕಿಸಿಕೊಂಡಿದ್ದಾರೆ. ಬಳಿಕ ಹೊಟ್ಟೆ ನೋವು, ವಾಂತಿ ಪ್ರಾರಂಭವಾಗಿತ್ತು.

ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳನ್ನು ಬೇಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿತ್ತು.