ಮನೆ ಅಪರಾಧ ಗೋ ಸಾಗಾಟದ ವೇಳೆ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣ: ಗುಜರಾತ್ ನಲ್ಲಿ ಪುನೀತ್ ಕೆರೆಹಳ್ಳಿ ಬಂಧನ

ಗೋ ಸಾಗಾಟದ ವೇಳೆ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣ: ಗುಜರಾತ್ ನಲ್ಲಿ ಪುನೀತ್ ಕೆರೆಹಳ್ಳಿ ಬಂಧನ

0

ಬೆಂಗಳೂರು: ಕನಪುರದ ಸಾತನೂರು ಬಳಿ ಗೋ ಸಾಗಾಟ ವೇಳೆ ವ್ಯಕ್ತಿಯೋರ್ವನ ಅನುಮಾನಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರರನ್ನು ಸಾತನೂರು ಠಾಣೆ ಪೊಲೀಸರು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Join Our Whatsapp Group

ಮಾರ್ಚ್ 31 ರಂದು ಪುನೀತ್ ಕೆರೆಹಳ್ಳಿ ಹಾಗೂ ತಂಡ ಗೋವುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ತಡೆದು ಜಾನುವಾರು ರಕ್ಷಣೆ ಮಾಡಿದ್ದರು. ಆದರೆ ಮಾರನೇ ದಿನ ಅಂದ್ರೆ ಏಪ್ರಿಲ್ 1ರಂದು ಕ್ಯಾಂಟರ್ ನಲ್ಲಿದ್ದ ಇದ್ರೀಷ್ ಪಾಷ(35) ಶವವಾಗಿ ಪತ್ತೆಯಾಗಿದ್ದರು.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಬಳಿ ಮಂಡ್ಯದ ಗುತ್ತಲು ನಿವಾಸಿ ಇದ್ರೀಷ್ ಪಾಷ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಮೃತನ ಸಹೋದರ ಸಾತನೂರು ಠಾಣೆಗೆ ಪುನೀತ್ ಕೆರೆಹಳ್ಳಿ ಸೇರಿದಂತೆ ಇತರರರ ವಿರುದ್ಧ ದೂರು ನೀಡಿದ್ದರು.

ಐಪಿಸಿ ಸೆಕ್ಷನ್ 341, 504, 506, 324, 302, 34 ರ ಅಡಿ ಕೇಸ್ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ಕಳೆದ ಐದು ದಿನದಿಂದ ಪುನೀತ್ ಅಂಡ್ ಟೀಂ ತಲೆ ಮರೆಸಿಕೊಂಡಿತ್ತು. ಇನ್ನು ಆರೋಪಿಗಳನ್ನು ಬಂಧಿಸಲು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ನಾಲ್ಕು ತಂಡಗಳನ್ನು ರಚಿಸಿದ್ದರು. ಇದೀಗ ಅಂತಿಮವಾಗಿ ಆರೋಪಿಗಳು ರಾಜಸ್ಥಾನದಲ್ಲಿ ಸಿಕ್ಕಿಬಿದ್ದಿದ್ದಾರೆ.

ಪೊಲೀಸರ ಕಣ್ತಪ್ಪಿಸಿಕೊಂಡಿದ್ದ ಪುನೀತ್ ಕೆರೆಹಳ್ಳಿ, ನನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದರೆ ವಿಚಾರಣೆ ಎದುರಿಸುತ್ತೇನೆ. ಪ್ರಕರಣದ ವಿಚಾರವಾಗಿ ಕಾನೂನಾತ್ಮಕವಾಗಿ ಹೋರಾಟ ಮಾಡುವುದಾಗಿ ವಿಡಿಯೋ ಬಿಡುಗಡೆ ಮಾಡಿದ್ದ. ಅಲ್ಲದೇ ಮಂಡ್ಯದಿಂದ ಹಲಗೂರು, ಸಾತನೂರು ಮಾರ್ಗವಾಗಿ ನಿರಂತರವಾಗಿ ಜಾನುವಾರು ಸಾಗಣೆಯಾಗುತ್ತಿದ್ದು, ಇದಕ್ಕೆ ರಾಜಕಾರಣಿಗಳ ಕೃಪಾಕಟಾಕ್ಷವಿದೆ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಾನೆ.

ಹಿಂದಿನ ಲೇಖನಕೇರಳ ರೈಲಿಗೆ ಬೆಂಕಿ ಹಚ್ಚಿದ್ದ ಆರೋಪಿ ಬಂಧನ
ಮುಂದಿನ ಲೇಖನಸಿಎಂ ಬೊಮ್ಮಾಯಿಗೆ ನನ್ನ ಬೆಂಬಲ: ನಟ ಸುದೀಪ್